ಕನ್ಯಾಡಿ: ಬೈಂದೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆಯವರು ಸೆಪ್ಟೆಂಬರ್ 01 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿದರು. ಶಾಸಕರ ನೇತೃತ್ವದಲ್ಲಿ ಸಮೃದ್ಧ ಬೈಂದೂರು ಯೋಜನೆಯಡಿಯಲ್ಲಿ ಬೈಂದೂರು ತಾಲೂಕಿನ ಪಡುವರಿ ಗ್ರಾಮದ ಹೇನಬೇರು ಶಾಲೆಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಯ ನಿರ್ವಹಣೆ ಮತ್ತು ಪುನಶ್ಚೇತನ ಕೇಂದ್ರದ ಉದ್ದೇಶಿತ ಕಟ್ಟಡ “ಸೇವಾಧಾಮದ” ಬಗ್ಗೆ ಮಾಹಿತಿ ವಿನಿಮಯ ಮಾಡಲಾಯಿತು ಹಾಗೂ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡ ನಿರ್ಮಾಣದ ಕಾರ್ಯವನ್ನು ವೀಕ್ಷಿಸಿ ಕಟ್ಟಡ ನಿರ್ಮಾಣ ಶೀಘ್ರವಾಗಿ ನೆರವೇರುವಂತೆ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.