ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿಂದ ಶಾಂತಿ ಕದಡುವ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಸುಳ್ಳು ಸುದ್ದಿ, ಸಂದೇಶ, ಪೋಸ್ಟ್ಗಳ ಹಾವಳಿ ಮಿತಿಮೀರಿದೆ. ಇದರ ಹಿಂದೆ ಸಂಘಟನೆಗಳ ವ್ಯಕ್ತಿಗಳು, ಕೆಲ ಕಿಡಿಗೇಡಿಗಳು, ವಿದ್ಯಾವಂತರು ಕೂಡ ಇರುವುದು ಆತಂಕಕಾರಿ ವಿಷಯವಾಗಿದೆ. ಪ್ರಜ್ಞಾವಂತ ಸಮಾಜ ಮತ್ತು ಮಾಧ್ಯಮಗಳು ನೈಜತೆಯನ್ನು ಬಹಿರಂಗಪಡಿಸುವ ಮೂಲಕ ಸಮಾಜವನ್ನು ಎಚ್ಚರಿಸುವ ಅನಿವಾರ್ಯತೆ ಎದುರಾಗಿದೆ ಎಂದು ಪೊಲೀಸ್ ಇಲಾಖೆ ಕಳಕಳಿಯಿಂದ ಮನವಿ ಮಾಡಿದೆ.
ಜಿಲ್ಲೆಯಲ್ಲಿ ವಿವಿಧ ವಿಚಾರಗಳಲ್ಲಿ ಸತ್ಯವನ್ನು ಮರೆಮಾಚಿ, ಸುಳ್ಳು ಸುದ್ದಿಗಳನ್ನು ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಮ್ ನಲ್ಲಿ ಪೇಜ್ ತೆರೆದು ಫೇಕ್ ಐಡಿ ಮೂಲಕ ದ್ವೇಷ ಹರಡುವ ಮೂಲಕ ಸಮಾಜ ದಲ್ಲಿ ಅಶಾಂತಿ ಸೃಷ್ಟಿ ಮೇಲೆ ಪ್ರಚಾರ ಮಾಡುವ ಮೂಲಕ ಸಮಾಜಕ್ಕೆ ತಪ್ಪು ಸಂದೇಶ ನೀಡುವ ಕಾರ್ಯ ಕೆಲವು ವ್ಯಕ್ತಿಗಳಿಂದ ನಿರಂತರವಾಗಿ ನಡೆಯುತ್ತಿದೆ. ಇಂತಹ ಕೃತ್ಯಗಳು ಜನರನ್ನು ಪ್ರಚೋದನೆಗೆ ಒಳಪಡಿಸಿ, ಸಮಾಜ ಘಾತುಕ ಕೃತ್ಯಗಳಲ್ಲಿ ತೊಡಗುವಂತೆ ಮಾಡಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿವೆ. ಇದರಿಂದಾಗಿ ಜಿಲ್ಲೆಯಲ್ಲಿ ಶಾಂತಿ ಹದಗೆಡುತ್ತಿದ್ದು, ಈಗಾಗಲೇ ಹಲವು ಪ್ರಕರಣಗಳು ಪೊಲೀಸ್ ಇಲಾಖೆಯಲ್ಲಿ ದಾಖಲಾಗಿವೆ.
ಉದ್ದೇಶಪೂರ್ವಕವಾಗಿ ಸುಳ್ಳು ಸುದ್ದಿಗಳನ್ನು ಹರಡುತ್ತಾ, ಸಂಪೂರ್ಣ ವಿಷಯವನ್ನು ಮುಚ್ಚಿಟ್ಟು, ಅರ್ಧಸತ್ಯವನ್ನು ಮಾತ್ರ ತೋರಿಸಿ ಜನಸಾಮಾನ್ಯರನ್ನು ತಪ್ಪು ದಾರಿಯಲ್ಲಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಅತ್ಯಗತ್ಯವಾಗಿದೆ. ಸಾರ್ವಜನಿಕರಿಗೆ ನಿಖರ ಮಾಹಿತಿಯನ್ನು ತಲುಪಿಸುವುದರ ಜೊತೆಗೆ, ಇಂತಹ ಸುಳ್ಳು ಸುದ್ದಿ ಹರಡುವವರನ್ನು ಮಾಧ್ಯಮಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಪೊಲೀಸ್ ಅಧೀಕ್ಷಕರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಹಲವು ಜನರು ಸತ್ಯವನ್ನು ಮರೆಮಾಚಿ, ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡಿ ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಜನರನ್ನು ಪ್ರಚೋದನೆಗೆ ಒಳಪಡಿಸಿ, ಸಮಾಜ ಘಾತುಕ ಕೃತ್ಯಗಳಲ್ಲಿ ತೊಡಗುವಂತೆ ಮಾಡಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿದೆ. ಇದು ಜಿಲ್ಲೆಯಲ್ಲಿ ಶಾಂತಿ ಹದಗೆಡಲು ಕಾರಣವಾಗುತ್ತಿದೆ. ಈ ಸಂಬಂಧ ಈಗಾಗಲೇ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ.
“ಸುಳ್ಳು ಸುದ್ದಿ ಅಥವಾ ಪ್ರಚೋದನಾಕಾರಿ ಸಂದೇಶಗಳನ್ನು ಜಿಲ್ಲೆಯ ಜನರು ನಂಬಬಾರದು. ಅಂತಹ ಪೋಸ್ಟ್ಗಳಿಗೆ ಪ್ರತಿಕ್ರಿಯೆ ನೀಡದೆ, ಅಂತಹ ವ್ಯಕ್ತಿಗಳು/ಸಂಘಟನೆಗಳನ್ನು ಕಡೆಗಣಿಸಿದಾಗ ಮಾತ್ರ ಅವುಗಳನ್ನು ಹರಡುವುದನ್ನು ತಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ,ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಮ್, ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸಂದೇಶ ಅಥವಾ ಪೋಸ್ಟ್ ಹಂಚುವ ಮೊದಲು, ಅದರ ನೈಜತೆಯನ್ನು ಪರಿಶೀಲಿಸುವಂತೆ ಈ ಮೂಲಕ ಕೇಳಿಕೊಳ್ಳಲಾಗಿದೆ” ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಉದ್ದೇಶಪೂರ್ವಕವಾಗಿ ಸುಳ್ಳು ಸುದ್ದಿಗಳನ್ನು ಹರಡುತ್ತಾ, ಸಂಪೂರ್ಣ ವಿಷಯವನ್ನು ಮುಚ್ಚಿಟ್ಟು, ಅರ್ಧಸತ್ಯವನ್ನು ಮಾತ್ರ ತೋರಿಸುವ ಮೂಲಕ ಜನಸಾಮಾನ್ಯರನ್ನು ತಪ್ಪು ದಾರಿಯಲ್ಲಿ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳುವುದು ಅತ್ಯಂತ ಅಗತ್ಯ. ಮಾಧ್ಯಮ ಮಿತ್ರರು ಸಾರ್ವಜನಿಕರಿಗೆ ಮಾಹಿತಿಯನ್ನು ತಲುಪಿಸುವುದರ ಜೊತೆಗೆ, ಇಂತಹ ಸುಳ್ಳು ಸುದ್ದಿ ಹರಡುವವರನ್ನು ಗಂಭೀರವಾಗಿ ಪರಿಗಣಿಸಿ, ಅಂತಹ ಕಿಡಿಗೇಡಿಗಳು/ಸಂಘಟಕರ ವಿವರಗಳನ್ನು ಬಹಿರಂಗಪಡಿಸುವ ಮೂಲಕ ಸಮಾಜವನ್ನು ಎಚ್ಚರಿಸುವ ಕಾರ್ಯವನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಮನವಿ ಮಾಡಿದ್ದಾರೆ.