ವಿಟ್ಲ : ಭಾರತದ ಪ್ರಧಾನಿ ನರೇಂದ್ರ ಮೋದಿಯವರ 75 ನೇ ಜನುಮದಿನದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಭಾರತದ ಅಭಿವೃದ್ಧಿಗೆ ಅವಿಶ್ರಾಂತವಾಗಿ ಶ್ರಮಿಸುತ್ತಿರುವ ಸನ್ಮಾನ್ಯ ಪ್ರಧಾನಿಗಳ ಶ್ರೇಯೋಭಿವೃದ್ಧಿಗಾಗಿ, ಉತ್ತಮ ಆರೋಗ್ಯಗೋಸ್ಕರ, ಅವರಿಗೆ ಇನ್ನಷ್ಟೂ ಶಕ್ತಿ ತುಂಬಲು ವಿಶೇಷ ಪೂಜೆಯನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ವಿಟ್ಲ ಅರಮನೆಯ ಕೃಷ್ಣಯ್ಯ ವಿಟ್ಲ, ಜಯರಾಮ ಬಲ್ಲಾಳ್, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ಸಾಲ್ಯಾನ್, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಉದಯಕುಮಾರ್ ಆಲಂಗಾರು, ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು, ಮಂಡಲ ಕಾರ್ಯದರ್ಶಿ ಶ್ರೀಕೃಷ್ಣ ವಿಟ್ಲ, ಮಂಡಲ ಹಿಂದುಳಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಮರುವಾಳ, ಮಂಡಲ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ, ಪಟ್ಟಣ ಪಂಚಾಯತ್ ಸದಸ್ಯರಾದ ಅಶೋಕ್ ಕುಮಾರ್ ಶೆಟ್ಟಿ, ಗ್ರಾಮೀಣ ಬ್ಯಾಂಕ್ ನಿರ್ದೇಶಕ ರಾಮದಾಸ್ ಶೆಣೈ, ಮಾಜಿ ಪಟ್ಟಣ ಪಂಚಾಯತ್ ಸದಸ್ಯರಾದ ಲೋಕನಾಥ ಶೆಟ್ಟಿ ಕೊಲ್ಯ, ಪ್ರಮುಖರುಗಳಾದ ಪದ್ಮನಾಭ ಕಟ್ಟೆ, ಅನಂತಪ್ರಸಾದ್ ಉಪಸ್ಥಿತರಿದ್ದರು.