ಉಡುಪಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ಎಸ್‌ಕೆಪಿಎ) ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ 35ನೇ ವಾರ್ಷಿಕ ಮಹಾಸಭೆ ಸೆ. 21ರಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 8.30ಕ್ಕೆ ಸಂಘದ ಸ್ಥಾಪಕ ಸದಸ್ಯರುಗಳಿಂದ ಧ್ವಜಾರೋಹಣ ನೆರವೇರಲಿದೆ. 9 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಎಸ್‌ಕೆಪಿಎ ಅಧ್ಯಕ್ಷ ಪದ್ಮಪ್ರಸಾದ್ ಜೈನ್ ಅಧ್ಯಕ್ಷತೆ ವಹಿಸಲಿದ್ದಾರೆ. ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು – ಉಡುಪಿ ಜಿಲ್ಲೆಯ ಸಂಚಾಲಕ ಶಿವಪ್ರಸಾದ್ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಎಸ್‌ಕೆಪಿಎ ಜಿಲ್ಲಾ ಸಂಚಾಲಕ ಕರುಣಾಕರ ಕಾನಂಗಿ ಛಾಯಾ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸೌತ್ ಕೆನರಾ ಫೋಟೋಗ್ರಾಫರ್ಸ್ ವಿವಿಧೋದ್ದೇಶ ಸಂಘದ ಅಧ್ಯಕ್ಷ ವಾಸುದೇವ ರಾವ್ ಮತ್ತು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಕಟ್ಟಡ ಸಮಿತಿ ಅಧ್ಯಕ್ಷ ಆನಂದ ಎನ್. ಬಂಟ್ವಾಳ್ ಭಾಗಿಯಾಗಲಿದ್ದಾರೆ.
ಕಾರ್ಯಕ್ರಮದಲ್ಲಿ ಎಸ್ಸೆಸೆಲ್ಸಿ ಪಿಯುಸಿಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾನಿಧಿ ಮತ್ತು ವಿದ್ಯಾಸ್ಫೂರ್ತಿ ಹೆಸರಿನಲ್ಲಿ ವಿದ್ಯಾರ್ಥಿ ವೇತನ ವಿತರಿಸಿ ಅಭಿನಂದಿಸಲಾಗುವುದು. ಇದೇ ಸಂದರ್ಭ ಹಿರಿಯ ಸದಸ್ಯರಿಗೆ ಗೌರವಾರ್ಪಣೆ ಹಾಗೂ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ ಛಾಯಾಗ್ರಾಹಕರನ್ನು ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಂಘದ ಸದಸ್ಯರು ಮತ್ತು ಸದಸ್ಯರ ಮಕ್ಕಳನ್ನು ಸನ್ಮಾನಿಸಲಾಗುವುದು.
ಛಾಯಾ ವಸ್ತು ಪ್ರದಶರ್ನದಲ್ಲಿ ನಿಕಾನ್, ಪ್ಯಾನಸೋನಿಕ್, ಫ್ಯೂಜಿ ಸೇರಿದಂತೆ ವಿವಿಧ ಪ್ರಸಿದ್ಧ ಛಾಯಾ ಕಂಪನಿಗಳು ಭಾಗಯಾಗಲಿವೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.