ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ಕಚೇರಿ ಉದ್ಘಾಟನಾ ಸಮಾರಂಭವು ಸೆ.22 ರಂದು ನಡೆಯಿತು.
ಕಾರ್ಯಕ್ರಮದ ಆರಂಭದಲ್ಲಿ ಪ್ರಾತಃಕಾಲದಲ್ಲಿ ಗಣಪತಿ ಹವನ ಜರುಗಿತು. ನಂತರ ಬೆಳಿಗ್ಗೆ 9 ಗಂಟೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಂಚಾಲಕರಾಗಿರುವ ಹಾಗೂ ಹೊಸದಿಗಂತ ಪತ್ರಿಕೆಯ ಮುಖ್ಯ ಕಾರ್ಯನಿರ್ವಾಹಕರಾದ ಪ್ರಕಾಶ್ ಪಿ.ಎಸ್. ಅವರು ದೀಪೋಜ್ವಲನೆ ನಡೆಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿದ.ಕ ಸಂಸದ ಕ್ಯಾ.ಬ್ರಿಜೇಶ್ ಚೌಟ, ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ವೇದವ್ಯಾಸ ಕಾಮತ ಶಾಸಕರಾದ ಉಮಾನಾಥ ಕೋಟ್ಯಾನ್, ಕುಮಾರಿ ಭಾಗೀರಥಿ ಮುರುಳ್ಯ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ, ಬಿಜೆಪಿ ತಾಲೂಕು ಪ್ರಮುಖರು, ಅನೇಕ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಸಾರ್ವಜನಿಕರು ಇತರ ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿ ಶುಭಹಾರೈಸಿದರು. ಶಾಸಕರು ಪ್ರತೀ ಸೋಮವಾರ ತಮ್ಮ ಮಂಗಳೂರು ಕಚೇರಿಯಲ್ಲಿ ಸಾರ್ವಜನಿಕರಿಗೆ ನೇರ ಸಂಪರ್ಕಕ್ಕೆ ಸಿಗಲಿದ್ದಾರೆ.