ಕನ್ನಡ ಸಾರಸ್ವತ ಲೋಕದ ಧ್ರುವ ನಕ್ಷತ್ರ ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ ಇನ್ನಿಲ್ಲ 94 ವರ್ಷದ ವಯಸ್ಸಿನವರಾಗಿದ್ದ ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ ಅವರು ಕಳೆದ ಕೆಲದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್‌ಎಲ್ ಭೈರಪ್ಪ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು ಎಂದು ತಿಳಿದು ಬಂದಿದೆ.
ಮೂರು ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲೇ ಇದ್ದ ಎಸ್‌ಎಲ್ ಭೈರಪ್ಪ ಅವರು ಹಿರಿಯ ಪತ್ರಕರ್ತ ವಿಶ್ವೇಶ್ವರ್ ಭಟ್ ಅವರ ಮನೆಯಲ್ಲಿ ವಾಸವಾಗಿದ್ದರು, 94 ವರ್ಷ ವಯಸ್ಸಿನ ಅವರು ಕಳೆದ ಕೆಲ ಸಮಯದಿಂದ ಮರೆವಿನ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.
ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಗೆ ಕಳೆದ ಕೆಲ ದಿನಗಳ ಹಿಂದೆ ದಾಖಲಾಗಿದ್ದ ಪದ್ಮಭೂಷಣ ಪುರಸ್ಕೃತ ಎಸ್‌ಎಲ್ ಭೈರಪ್ಪ ಅವರು, ಗೃಹಭಂಗ, ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ ಸೇರಿದಂತೆ ಅನೇಕ ಪ್ರಸಿದ್ಧ ಕಾದಂಬರಿಗಳನ್ನು ರಚಿಸಿ ಜನಮನ ಗೆದ್ದಿದ್ದರು. ಗೃಹ ಭಂಗ ಧಾರಾವಾಹಿಯಂತೂ ಇಂದಿಗೂ ಕೂಡ ಜನರ ಬಾಯಲ್ಲಿ ಸದಾ ಚರ್ಚೆಯಲ್ಲಿದೆ.