ಬಂದಾರು :ಬಂದಾರು ಸ.ಉ. ಹಿ. ಪ್ರಾಥಮಿಕ ಶಾಲೆ ಬಾಲಕಿಯರ ತಂಡ ವಿಟ್ಲ ಪದವಿ ಪೂರ್ವ ಕಾಲೇಜು ನಲ್ಲಿ ನಡೆದ 14 ನೇ ವಯೋಮಾನದ ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದಲ ವಾಲಿಬಾಲ್ ಪಂದ್ಯಾಟದಲ್ಲಿ ಸತತವಾಗಿ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ದಕ್ಷಿಣ ಕನ್ನಡ ಜಿಲ್ಲೆಯ ವಿವೇಕಾನಂದ ಮುಂಡಾಜೆಯಲ್ಲಿ ನಡೆಯುವ ವಿಭಾಗ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿ ಪ್ರಶಸ್ತಿ ತನ್ನದಾಗಿಸಿಕೊಂಡರು. ಉತ್ತಮ ಅಲ್ ರೌಂಡರ್ ಅಗಿ ಕು.ರಕ್ಷಿತಾ ಬಂದಾರು,ಉತ್ತಮ ಎತ್ತುವಿಕೆಗಾರ್ತಿಯಾಗಿ ಕು.ಅತಿಶ್ರೀ ವೈಯಕ್ತಿಕ ಪ್ರಶಸ್ತಿ ತನ್ನದಾಗಿಸಿಕೊಂಡರು. ಶಾಲಾ ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿಗಳು, ಪೋಷಕರು, ವಿದ್ಯಾಭಿಮಾನಿಗಳು ಸಹಕರಿಸಿದರು, ವಿಜೇತ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.