ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಅಭಿವೃದ್ದಿಗೆ ಸಂಬಂಧಿಸಿ ಸಮಿತಿ ರಚನೆ ಮಾಡಲಾಗಿದೆ. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಶಾಸಕ ಅಶೋಕ್ ಕುಮಾರ್ ರೈ, ಗೌರವಾಧ್ಯಕ್ಷರಾಗಿ ಉದ್ಯಮಿಗಳಾದ ಬಂಜಾರ ಪ್ರಕಾಶ್ ಶೆಟ್ಟಿ, ಸದಾಶಿವ ಶೆಟ್ಟಿ ಕನ್ಯಾನ, ಬಿಂದು ಸಂಸ್ಥೆಯ ಅಧ್ಯಕ್ಷ ಸತ್ಯಶಂಕರ್ ಅವರನ್ನು ಆಯ್ಕೆ ಮಾಡಲಾಗಿದೆ.

ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಆರ್ಥಿಕ ಸಮಿತಿಯ ಹೊರರಾಜ್ಯದ ಅಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿ, ಕಟ್ಟಡ ಸಮಿತಿ ಅಧ್ಯಕ್ಷರಾಗಿ ಸಂತೋಷ್ ರೈ ನಳೀಲು, ಕಾರ್ಯಾಧ್ಯಕ್ಷರಾಗಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ವಿನಯ ಸುವರ್ಣ, ದಿಗ್ದರ್ಶಕರಾಗಿ ಕೇಶವಪ್ರಸಾದ್ ಮುಳಿಯ ಅವರನ್ನು ಆಯ್ಕೆ ಮಾಡಲಾಗಿದೆ.
ಉಳಿದಂತೆ ಸದಸ್ಯರಾಗಿ ಮುಂಬಯಿ ಅಲ್ ಕಾರ್ಗೋದ ಶಶಿಕುಮಾರ್, ಜಿ.ಎಲ್.ಆಚಾರ್ಯ ಜ್ಯುವೆಲ್ಲರ‍್ಸ್‌ನ ಮಾಲಕ ಬಲರಾಮ ಆಚಾರ್ಯ, ಮಾಸ್ಟರ್ ಪ್ಲಾನರಿಯ ಎಸ್.ಕೆ.ಆನಂದ್, ಸಂಜೀವ ಶೆಟ್ಟಿ ಆಂಡ್ ಸನ್ಸ್‌ನ ಮುರಳಿಧರ ಶೆಟ್ಟಿ, ಮಿತ್ರಂಪಾಡಿ ಜಯರಾಮ ರೈ ಅಬುದಾಬಿ, ಪಾಪ್ಯುಲರ್ ಸ್ವೀಟ್ಸ್‌ನ ಮಾಲಕ ಮಾನೂರು ನರಸಿಂಹ ಕಾಮತ್, ರಾಧಾ’ಸ್ ಡ್ರೆಸಸ್‌ನ ಪ್ರಕಾಶ್ ಕಾಮತ್, ಗಣೇಶ್ ಕಾಮತ್, ದ್ವಾರಕಾ ಸಂಸ್ಥೆಯ ಗೋಪಾಲಕೃಷ್ಣ ಭಟ್, ಎನ್.ಶಿವಪ್ರಸಾದ್ ಶೆಟ್ಟಿ ಕಿನಾರ, ಕೋಟಿಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಶಿವರಾಮ ಆಳ್ವ, ಪ್ರಸಾದ್ ಕೌಶಲ್ ಶೆಟ್ಟಿ, ಅಮರನಾಥ ಗೌಡ ಬಪ್ಪಳಿಗೆ, ರಾಜರಾಮ ಶೆಟ್ಟಿ ಕೋಲ್ಪೆಗುತ್ತು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ, ನಿವೃತ್ತ ಎಸ್ಪಿ ರಾಮದಾಸ ಗೌಡ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು ಸಹಿತ ಹಲವರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.























