ಜೆಡಿಎಸ್ನಿಂದ ಸಂಸದ ಪ್ರಜ್ವಲ್ ರೇವಣ್ಣ , ಪ್ರಜ್ವಲ್ ವಿರುದ್ಧ ಪಕ್ಷ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೆ. ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಅನುಭವಿಸಲೇ ಬೇಕು.
ಎಸ್ಐಟಿ( ರಚನೆಯಾಗಿದೆ ತನಿಖೆ ಮೂಲಕ ಸತ್ಯಾಂಶ ಹೊರ ಬರಲಿ. ಎಸ್ಐಟಿ ತಪ್ಪು ಸಾಬೀತು ಮಾಡಿದ್ರೆ ಶಿಕ್ಷೆ ಅನುಭವಿಸಲೇ ಬೇಕು. ಅಶ್ಲೀಲ ವಿಡಿಯೋ ಪ್ರಕರಣ ವೈಯಕ್ತಿಯವಾಗಿ ವ್ಯಕ್ತಿಯ ಹಿನ್ನೆಲೆಯಲ್ಲಿ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಕುಟುಂಬವನ್ನು ಏಕೆ ಎಳೆಯುತ್ತೀರಾ..? ದೇವೇಗೌಡರು , ನನ್ನ ಹೆಸರನ್ನು ಏಕೆ ಇದರಲ್ಲಿ ಸೇರಿಸುತ್ತೀರಾ..? ಎಂದು ಹೆಚ್ಡಿಕೆ ಪ್ರಶ್ನಿಸಿದ್ದಾರೆ.
ದೇವೇಗೌಡರು ನಾನು ಮಹಿಳೆಯರ ವಿಚಾರದಲ್ಲಿ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಪ್ರಜ್ವಲ್ ವಿಚಾರ ಈಗ ತಿಳಿದಿದೆ , ಮೊದಲೇ ತಿಳಿದಿದ್ದರೆ ಕ್ರಮ ತೆಗೆದುಕೊಳ್ಳುತ್ತಿದ್ದೆ. ಅಶ್ಲೀಲ ವಿಡಿಯೋ ಪ್ರಕರಣ ಕುಟುಂಬಕ್ಕೆ ಮಾತ್ರವಲ್ಲ, ಇಡೀ ಸಮಾಜಕ್ಕೆ ಮುಜುಗರ ಎಂದು ಕುಮಾರಸ್ವಾಮಿ ಹೇಳಿದ್ದಾರೆ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಕಳೆದ ಗುರುವಾರ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದರು. ”ಜನಸಾಮಾನ್ಯರನ್ನು ತಲುಪಿರುವ ಪೆನ್ಡ್ರೈವ್ಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ತುಣುಕುಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿಎಸ್ಐಟಿ ತನಿಖೆ ನಡೆಸಬೇಕು” ಎಂದು ಕೋರಿದ್ದರು. ಅದರೊದಿಗೆ ಹಲವು ಜನಪರ ಹಾಗೂ ಮಹಿಳಾ ಪರ ಸಂಘಟನೆಗಳು ಈ ಸಂಬಂಧ ತನಿಖೆ ನಡೆಸುವಂತೆ ಸರಕಾರವನ್ನು ಆಗ್ರಹಿಸಿದ್ದವು.