• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

November 2, 2025
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

by ಪ್ರಜಾಧ್ವನಿ ನ್ಯೂಸ್
November 2, 2025
in ಕ್ರೀಡೆ, ಜಿಲ್ಲೆ, ದಕ್ಷಿಣ ಕನ್ನಡ, ಮಂಗಳೂರು, ರಾಜ್ಯ
0
ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ
9
SHARES
26
VIEWS
ShareShareShare

ಮಂಗಳೂರು: ಯುವ ಜನರು ಸೇರಿದಂತೆ ಸಮಾನ ಮನಸ್ಕರ ಒಗ್ಗಟ್ಟು, ಧರ್ಮದ ಚಿಂತನೆ, ಸ್ವಾರ್ಥ ರಹಿತ ಕೆಲಸಕ್ಕೆ ಭಗವಂತನ ಆಶೀರ್ವಾದ ಸದಾ ಇರುತ್ತದೆ ಎನ್ನುವುದಕ್ಕೆ ಮಂಗಳೂರು ಕಂಬಳವೇ ಸಾಕ್ಷಿ ಎಂದು ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಹೇಳಿದ್ದಾರೆ.

ಡಿ.27ರಂದು ನಡೆಯಲಿರುವ ಮಂಗಳೂರು ಕಂಬಳದ ಕುರಿತಂತೆ ನಗರದ ಪತ್ತುಮುಡಿ ಸೌಧದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಾಮಾನ್ಯ ಯುವಕರೆಲ್ಲ ಸೇರಿಕೊಂಡು ಆರಂಭಿಸಿದ್ದ ಮಂಗಳೂರು ಕಂಬಳಕ್ಕೆ ಈ ಬಾರಿ 9ನೇ ವರ್ಷದ ಸಂಭ್ರಮವಾಗಿರುವುದು ಅತ್ಯಂತ ಖುಷಿಯ ವಿಚಾರ. ಈ ನಿಟ್ಟಿನಲ್ಲಿ ಒಂಬತ್ತು ರೀತಿಯ ವಿಭಿನ್ನ ಕಾರ್ಯಕ್ರಮ ಆಯೋಜಿಸುವ ಯೋಚನೆ ಇಟ್ಟುಕೊಂಡಿದ್ದೇವೆ ಎಂದು ಕ್ಯಾ. ಚೌಟ ತಿಳಿಸಿದ್ದಾರೆ.

ಕರಾವಳಿಯ ಜನಪದ ಕ್ರೀಡೆಯಾದ ಕಂಬಳ ನಿಷೇಧವಾಗುತ್ತದೆ ಎಂದಾಗ ಅದರ ವಿರುದ್ಧ ಮಂಗಳೂರಿನಲ್ಲಿ ಪಕ್ಷ-ಬೇಧವಿಲ್ಲದೆ ದೊಡ್ಡ ಪ್ರತಿಭಟನೆ ನಡೆಸಲಾಗಿತ್ತು. ಮಂಗಳೂರು ನಗರದಲ್ಲಿ ಕಂಬಳ ಆರಂಭಗೊಳ್ಳಲು ಆ ದಿನವೇ ನಿರ್ಧರಿಸಲಾಗಿತ್ತು. ಅದೇ ಹುಮ್ಮಸ್ಸಿನಲ್ಲಿ ಗೋಲ್ಡ್ ಫಿಂಚ್ ಸಮೂಹ ಸಂಸ್ಥೆಯ ಮಾಲೀಕ ಪ್ರಕಾಶ್ ಶೆಟ್ಟಿ ಸಹಕಾರದಲ್ಲಿ ಮಂಗಳೂರು ಕಂಬಳ ಆರಂಭಿಸಿ, ಸತತ 8 ವರ್ಷಗಳಿಂದ ಅದನ್ನು ಬಹಳ ವಿಭಿನ್ನ ರೀತಿಯಲ್ಲಿ ನಡೆಸುತ್ತಾ ಬರಲಾಗಿದೆ. ಮಂಗಳೂರು ಕಂಬಳ ಇಷ್ಟೊಂದು ಯಶಸ್ವಿಯಾಗಿ ಹಾಗೂ ಅಚ್ಚು-ಕಟ್ಟಾಗಿ ನಡೆಯುತ್ತಿರುವುದಕ್ಕೆ ನಮ್ಮ ಯುವಕರ ತಂಡದ ಹುಮ್ಮಸ್ಸು ಪ್ರಮುಖ ಕಾರಣವಾಗಿದೆ. ಈ ಬಾರಿ 9ನೇ ವರ್ಷ ಆಗಿರುವುದರಿಂದ ಒಂಬತ್ತು ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅದರಲ್ಲಿ ಮರೆಯಾಗುತ್ತಿರುವ ಜನಪದ ಕ್ರೀಡೆ ಬಗ್ಗೆ ಮಕ್ಕಳಿಗೆ ತಿಳಿಸಿಕೊಡುವುದು ಸೇರಿದಂತೆ ದೇಶ-ವಿದೇಶಗಳಿಗೆ ತೆರಳಿ ಉದ್ಯಮ ಕಟ್ಟಿದ ನಮ್ಮ ಊರಿನ ಸಾಧಕರನ್ನು ಈ ಕಂಬಳಕ್ಕೆ ಕರೆಸಿ ಸನ್ಮಾನಿಸುವ ಚಿಂತನೆ ಕೂಡ ಸೇರಿವೆ. ಶೀಘ್ರದಲ್ಲೇ ಈ ಎಲ್ಲ 9 ಕಾರ್ಯಕ್ರಮಗಳ ಬಗ್ಗೆ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಕ್ಯಾ. ಚೌಟ ಹೇಳಿದ್ದಾರೆ.

ಸಭೆಯಲ್ಲಿ ಉಪಸ್ಥಿತರಿದ್ದ ಮಾಜಿ ಸಚಿವ ನಾಗರಾಜ ಶೆಟ್ಟಿ ಮಾತನಾಡಿ, ಸಂಸದರಾಗಿ ಹಾಗೂ ಕಂಬಳದ ರುವಾರಿಯಾಗಿ ಕ್ಯಾ. ಬ್ರಿಜೇಶ್‌ ಚೌಟ ಅವರು ದಕ್ಷಿಣ ಕನ್ನಡ ಅಭಿವೃದ್ಧಿ ಜತೆಗೆ ತುಳುನಾಡಿನ ನಮ್ಮ ಜನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿರುವುದು ಶ್ಲಾಘನೀಯ. ಪ್ರಧಾನಿ ಮೋದಿ ಸೇರಿದಂತೆ ದೆಹಲಿಯಲ್ಲಿರುವ ಹಲವು ಗಣ್ಯರಿಗೆ ಕ್ಯಾ. ಚೌಟ ಅವರು ನಮ್ಮ ಕಂಬಳದ ಬಗೆಗಿನ ಸ್ಮರಣಿಕೆಯನ್ನು ನೀಡುವ ಮೂಲಕ ಈ ಜಾನಪದ ಕ್ರೀಡೆಯ ಅರಿವನ್ನು ರಾಷ್ಟ್ರರಾಜಧಾನಿಯಲ್ಲಿಯೂ ಮೂಡಿಸುತ್ತಿದ್ದಾರೆ. ಮುಂದೆ ಇದು ವಿಶ್ವಮಟ್ಟದಲ್ಲಿಯೂ ಹರಡುವ ಕೆಲಸವು ಕ್ಯಾ. ಚೌಟ ಅವರಿಂದ ಆಗಲಿ ಎಂದು ಅವರು ಹಾರೈಸಿದ್ದಾರೆ.

ಮಂಗಳೂರಿನಂಥ ನಗರದಲ್ಲಿ ಕಂಬಳವನ್ನು ಆಯೋಜಿಸುವುದು ಅಷ್ಟೊಂದು ಸುಲಭದ ಕೆಲಸವಲ್ಲ. ಅದು ಪಕ್ಷ-ಭೇದ ಇಲ್ಲದ ಒಟ್ಟಾಗಿ ಸಂಘಟನಾತ್ಮಕವಾಗಿ ಕೈಜೋಡಿಸುತ್ತಿರುವ ಯುವಕರ ತಂಡದ ಹುಮ್ಮಸ್ಸಿನಿಂದಾಗಿ ಇದು ಸಾಧ್ಯವಾಗಿದೆ. ಕ್ಯಾ. ಚೌಟ ಅವರ ನೇತೃತ್ವದ ಮಂಗಳೂರು ಕಂಬಳ 9 ವರ್ಷಕ್ಕೆ ಕಾಲಿಡುತ್ತಿದ್ದು, ಅವರ ಈ ಪ್ರಯತ್ನವು ನಿರಂತರ ಯಶಸ್ವಿಯಾಗಿ ಮುಂದುವರಿಯಲಿ ಎಂದರು.

ashwinistudioputtur

ಜಾಹೀರಾತು

ಕಂಬಳ ಸಮಿತಿಯ ಉಪಾಧ್ಯಕ್ಷ ಅನಿಲ್ ಕುಮಾರ್ ಮಾತನಾಡಿ, ಕುಳೂರಿನಲ್ಲಿ ಕಂಬಳ ನಡೆಸಿಕೊಂಡು ಬಂದಿದ್ದು ಆ ಭಾಗದಲ್ಲಿ ಹಬ್ಬದ ಕಳೆ ಪಡೆದಿದೆ. ಕಂಬಳದಿಂದಾಗಿ ಕುಳೂರಿನಲ್ಲಿ ವ್ಯಾಪಾರ- ಸಮೃದ್ಧಿಯಾಗಿ ಸ್ಥಳೀಯವಾಗಿ ಅಭಿವೃದ್ಧಿಗೂ ಕಾರಣವಾಗಿದೆ. ಇದರಿಂದ ಈ ಪ್ರದೇಶದಲ್ಲಿ ಬೇರೆ-ಬೇರೆ ಕಾರ್ಯಕ್ರಮಗಳಿಗೂ ನಾಂದಿ ಹಾಡಿದೆ. ಈ ಭಾಗದ ಪ್ರತಿನಿಧಿಯಾಗಿ ಮಂಗಳೂರು ಕಂಬಳಕ್ಕೆ ಸದಾ ನನ್ನ ಬೆಂಬಲವಿರುತ್ತದೆ ಎಂದು ಹೇಳಿದರು.

ಮಂಗಳೂರು ಕಂಬಳ ಸಮಿತಿಯ ಗೌರವ ಸಲಹೆಗಾರರಾದ ಪ್ರಸಾದ್ ಕುಮಾರ್ ಶೆಟ್ಟಿ, ಕುಳೂರು ಪೊಯ್ಯೆಲು ಪಿ.ಆರ್ ಶೆಟ್ಟಿ, ಕಂಬಳ ಸಮಿತಿಯ ಉಪಾಧ್ಯಕ್ಷರು ಹಾಗೂ ಮಾಜಿ ಮನಪಾ ಸದಸ್ಯರಾದ ಕದ್ರಿ ಮನೋಹರ್ ಶೆಟ್ಟಿ, ಭರತ್ ಸೂಟರ್ ಪೇಟೆ, ಸಂದೀಪ್ ಗರೋಡಿ, ಸಂಜಯ ಪ್ರಭು, ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ ಉಪಸ್ಥಿತರಿದ್ದರು. ಈಶ್ವರ್ ಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಮನ್ಮಥ್ ಶೆಟ್ಟಿ ಪುತ್ತೂರು ನಿರೂಪಿಸಿ, ಕಂಬಳ ಸಮಿತಿ ಸಂಚಾಲಕ ಸಚಿನ್ ಶೆಟ್ಟಿ ಸಾಂತ್ಯ ವಂದಿಸಿದರು.

Muliya

ಜಾಹೀರಾತು

SendShare4Share
Previous Post

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Next Post

ರಾಜ್ಯ ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಕ್ಲಾಸ್; ಕಾಂಗ್ರೆಸ್ ಬೀಸಿರುವ ಜಾಲದಲ್ಲಿ ಸಿಕ್ಕಿಬೀಳಬೇಡಿ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In