ಏರ್ಪೋಟ್ಗೆ ಬಂದಿದ್ದ ಹಲವು ಮುಸಲ್ಮಾನರು ಏಕಾಏಕಿ ವಿಮಾನ ನಿಲ್ದಾಣದಲ್ಲೇ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಏರ್ಪೋಟ್ನ ಟರ್ಮಿನಲ್ 2ರಲ್ಲಿ ಸಾಮೂಹಿಕ ಪ್ರಾರ್ಥನೆ ನಡೆದಿದೆ. ಸಾರ್ವಜನಿಕರ ಸ್ಥಳದಲ್ಲಿ ಸಾಮೂಹಿಕವಾಗಿ ನಮಾಜ್ ಮಾಡಿದ್ದಕ್ಕೆ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.
ಸಾರ್ವಜನಿಕರ ಸ್ಥಳದಲ್ಲಿ ಮುಸ್ಲಿಂರು ಸಾಮೂಹಿಕವಾಗಿ ನಮಾಜ್ ಮಾಡಿದ್ರೂ ಏರ್ಪೋಟ್ ಸಿಬ್ಬಂದಿ, ಭದ್ರತಾ ಪಡೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಸುಮ್ಮನೆ ನಿಂತು ನೋಡ್ತಿದ್ದನ್ನ ಕಂಡು ಸಾರ್ವಜನಿಕರು ಕೂಡ ಆಕ್ರೋಶ ಹೊರಹಾಕಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಾಕಿ ನೆಟ್ಟಿಗರು ಆಕ್ರೋಶ ಹೊರ ಹಾಕಿದ್ದಾರೆ. ಏರ್ಪೋಟ್ ಒಳ ಭಾಗದಲ್ಲಿ ಪ್ರಯಾಣಿಕರಿಗೆ ಪ್ರಾರ್ಥನಾ ಕೊಠಡಿಯಿದ್ರೂ ಹೊರಗಡೆ ನಮಾಜ್ ಮಾಡಿದ್ಯಾಕೆ ಎಂದು ಪ್ರಶ್ನೆ ಮಾಡ್ತಿದ್ದಾರೆ.
ಮೆಕ್ಕಾಗೆ ತೆರಳುತ್ತಿದ್ದವರನ್ನ ಬೀಳ್ಕೊಡಲೆಂದು ಕೆಲವು ಮುಸ್ಲಿಂರು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಸಾರ್ವಜನಿಕ ಸ್ಥಳದಲ್ಲೇ ಏಕಾಏಕಿ ನಮಾಜ್ ಮಾಡಿದ್ದಾರೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲೂ ವೈರಲ್ ಆಗ್ತಿದೆ. ಈ ಬಗ್ಗೆ ನೆಟ್ಟಿಗರು ಕೂಡ ಕಿಡಿಕಾರ್ತಿದ್ದಾರೆ. ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಆದ್ರೆ ಈ ಬಗ್ಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.























