ನೆಲಮಂಗಲ: ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಯುವಕನೋರ್ವ ಅತ್ಯಾಚಾರವೆಸಗಿರುವಂತಹ ಘಟನೆ ನಿನ್ನೆ ಸಂಜೆ 7:30ಕ್ಕೆ ನಡೆದಿದೆ. ಸಂತ್ರಸ್ತ ಬಾಲಕಿಯ ಹುಟ್ಟುಹಬ್ಬ ಕೇಕ್ ಕಟ್ ಮಾಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆರೋಪಿ ಯತೀಶ್(26) ಕೃತ್ಯವೆಸಗಿದ್ದಾನೆ. ಸದ್ಯ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.





















