ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳಾಗಿದ್ದು, ಅಲ್ಲಿ ಅಂಥ ಅನಿವಾರ್ಯತೆ ಇದೆ ಎಂಬ ತಮ್ಮ ವಿವಾದಾತ್ಮಕ ಹೇಳಿಕೆ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕ್ಷಮೆ ಕೇಳಿದ್ದಾರೆ. ಅದರ ಜೊತೆಗೆ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಅವರು, ಕೆಲ ಯಕ್ಷಗಾನ ಕಲಾವಿದರು ಸಲಿಂಗಿಗಳು ಹೌದು. ಈ ವಿಚಾರವನ್ನು ನಾನು ಹೊಸದಾಗಿ ಹೇಳುತ್ತಿಲ್ಲ ಎಂದಿದ್ದಾರೆ. ನನ್ನ ಉದ್ದೇಶ ಕಲಾವಿದರ ಬದುಕು ಉಜ್ವಲಗೊಳಿಸುವುದು. ಹೀಗಾಗಿ ನನ್ನ ಹೇಳಿಕೆಯಿಂದ ಕಲಾವಿದರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ಯಕ್ಷಗಾನ ಕಲಾವಿದರು, ಅಭಿಮಾನಿಗಳಲ್ಲಿ ವಿಷಾದ ವ್ಯಕ್ತಪಡಿಸುವೆ ಎಂದಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನದಿಂದ ತೆಗೆದರೆ ಹೋಗುತ್ತೇನೆ. ಆದ್ರೆ ನನ್ನ ಉದ್ದೇಶ ಅವಮಾನ ಮಾಡುವುದು ಅಲ್ಲ ಎಂದಿದ್ದಾರೆ.





















