ಪುತ್ತೂರು : ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ಗ್ರಾಮಾಂತರ ಮಂಡಲದ ಮುಂದಿನ ಸಂಘಟನಾ ಅವಧಿಗೆ ಪ್ರಧಾನ ಕಾರ್ಯದರ್ಶಿಗಳಾಗಿ ಸುನೀಲ್ ದಡ್ಡು, ಲೋಕೇಶ್ ಚಾಕೋಟೆ, ನಗರ ಮಂಡಲದ ಮುಂದಿನ ಸಂಘಟನಾ ಅವಧಿಗೆ ಪ್ರಧಾನ ಕಾರ್ಯದರ್ಶಿಗಳಾಗಿ ಯುವರಾಜ್ ಪಿರಿಯತ್ತೋಡಿ ಹಾಗೂ ಶಶಿಧರ್ ನಾಯಕ್ ಇವರನ್ನು ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ.
ಪುತ್ತಿಲ ಪರಿವಾರದ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ, ನಾಗೇಶ್ ಅವರಿಗೆ ಗ್ರಾಮಾಂತರ ಮತ್ತು ಮಂಡಲದಲ್ಲಿ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ನೀಡಲಾಗಿತ್ತು. ಆದರೆ ಪುತ್ತಿಲ ಪರುವಾರದ ಅರುಣ್ ಪುತ್ತಿಲ ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡದ ಕಾರಣ ಕೆಲ ತಿಂಗಳ ಹಿಂದೆಯಷ್ಟೇ ಈ ನಾಲ್ವರು ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಅಟಲ್ ವಿರಾಸತ್ ಗೂ ಗೈರಾಗಿದ್ದರು. ಅದಾದ ಬೆನ್ನಲೇ ಈ ನಾಲ್ವರನ್ನು ಜವಾಬ್ದಾರಿಯಿಂದ ಬಿಡುಗಡೆಗೊಳಿಸಲಾಗಿದೆ.






















