ಸುಳ್ಯ: ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಸುಳ್ಯ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ.
ಗುತ್ತಿಗಾರಿನ ಚಿಕ್ಕುಳಿ ನಿವಾಸಿ ಶೇಷಪ್ಪ ಗೌಡರ ಪುತ್ರಿ, ಕಾಲೇಜು ವಿದ್ಯಾರ್ಥಿನಿ ಪೂಜಾ ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದಳು ಎನ್ನಲಾಗಿದೆ. ಅಸ್ವಸ್ಥಗೊಂಡ ಬಳಿಕ ವಿಷಯ ಗೊತ್ತಾಗಿ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೃತರು ತಂದೆ, ತಾಯಿ, ಸಹೋದರ, ಸಹೋದರಿ ಹಾಗೂ ಬಂಧುಗಳನ್ನು ಅಗಲಿದ್ದಾರೆ.






















