ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಲವು ಹೆಣ್ಣುಮಕ್ಕಳ ಜೊತೆ ನಡೆಸಿದ್ದ ಲೈಂಗಿಕ ಕ್ರಿಯೆಯ ವಿಡಿಯೊಗಳು ಬಹಿರಂಗಗೊಂಡು ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ ಮಾಜಿ ಬಿಜೆಪಿ ನಾಯಕ , ಶಿವಮೊಗ್ಗದ ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಅವರ ಪುತ್ರ ಕಾಂತೇಶ್ (Eshwarappa Son) ಏಪ್ರಿಲ್ 27ರಂದು ತಮ್ಮ ಬಗ್ಗೆ ಮಾನಹಾನಿಕರ ಸುದ್ದಿ, ಫೋಟೋ ಪ್ರಕಟಿಸದಂತೆ ಕೋರ್ಟಿನಿಂದ ತಡೆಯಾಜ್ಞೆ ತಂದಿರುವ ಬಗ್ಗೆ ವರದಿಯಾಗಿದೆ.
ರಾಜಕೀಯ ಮುಖಂಡರ ಅಶ್ಲೀಲ ವಿಡಿಯೋಗಳು ಬಹಿರಂಗಗೊಳ್ಳುವುದು ಮತ್ತು ಬಹಿರಂಗಗೊಳ್ಳುವ ಸೂಚನೆ ಸಿಗುತ್ತಿದ್ದಂತೆ ಕೋರ್ಟಿನಿಂದ ತಡೆಯಾಜ್ಞೆ ತರುವುದು ಹೊಸ ಬೆಳವಣಿಗೆಯೇನಲ್ಲ. ಎಲ್ಲಾ ಪಕ್ಷದ ಹಲವು ನಾಯಕರು ತಡೆಯಾಜ್ಞೆ ತಂದಿದ್ದಾರೆ ಆದರೂ ಬಿಜೆಪಿಯ ಇಂತಹ ಬೆಳವಣಿಗೆಗಳು ಹೆಚ್ಚು ಎನ್ನಲಾಗುತ್ತಿದೆ. ಹಾಗೆಯೇ, ರಾಜಕೀಯದಲ್ಲಿ ಅಶ್ಲೀಲ ವಿಡಿಯೋ, ಆಡಿಯೊ, ಫೋಟೊಗಳನ್ನು ಇಟ್ಟುಕೊಂಡು ಬ್ಲಾಕ್‌ಮೇಲ್ ಮಾಡುವುದು ಸಹಜ.
























