ಧರ್ಮಸ್ಥಳ (ಡಿ. 19): ಗ್ರಾಮ ಪಂಚಾಯತ್ ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ(ರಿ.), ಸೇವಾಭಾರತಿ(ರಿ.), ಕನ್ಯಾಡಿ, ದುರ್ಗಾ ಮಾತೃ ಮಂಡಳಿ ಕನ್ಯಾಡಿ ಇದರ ಸಹಭಾಗಿತ್ವದಲ್ಲಿ ಸ್ವ- ಸಹಾಯ ಸಂಘದ ಮಹಿಳೆಯರಿಗಾಗಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ ಡಿಸೆಂಬರ್ 19 ರಂದು ಧರ್ಮಸ್ಥಳ ಗ್ರಾಮ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.
ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಶ್ರೀನಿವಾಸ್ ರಾವ್ ಚಾಲನೆ ನೀಡಿ, ಭಾಗವಹಿಸಿದ ಮಹಿಳೆಯರಿಗೆ ಶುಭಹಾರೈಸಿದರು. ಈ ತರಬೇತಿ ಶಿಬಿರವು ಸ್ವ-ಉದ್ಯೋಗದ ಕಡೆಗೆ ಮಹತ್ವದ ಹೆಜ್ಜೆಯಾಗಿದೆ ಎಂದರು.
ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಧನಲಕ್ಷ್ಮಿ ಮಾತನಾಡಿ, ಟೈಲರಿಂಗ್ ಕಲಿಕೆ ಅನೇಕ ಉದ್ಯೋಗದ ಅವಕಾಶಗಳನ್ನು ಒದಗಿಸಬಲ್ಲದು. “ದೀಪ ಜ್ಯೋತಿ ಹೇಗೆ ಬೆಳಗುತ್ತದೋ, ಹಾಗೆಯೇ ನೀವು ಈ ವಿದ್ಯೆಯನ್ನು ಉಪಯೋಗಿಸಿ ಸಮಾಜದಲ್ಲಿ ಬೆಳಗಬೇಕು” ಎಂದು ಶುಭ ಹಾರೈಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಶ್ರೀಮತಿ ಗಾಯತ್ರಿ, NRLM ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಶ್ರೀಮತಿ ಪ್ರತಿಮಾ, ಪಂಚಾಯತ್ ಲೆಕ್ಕ ಸಹಾಯಕರು ಶ್ರೀಮತಿ ಪ್ರಮೀಳಾ, ದುರ್ಗಾಮಾತೃ ಮಂಡಳಿ ಅಧ್ಯಕ್ಷರು ಹಾಗೂ ಸಬಲಿನಿ ಯೋಜನೆಯ ಸಂಚಾಲಕಿ ಶ್ರೀಮತಿ ಮಮತಾ ಬಿ, ಕೌಶಲ್ಯ ವಲಯ ಮೇಲ್ವಿಚಾರಕರು ಶ್ರೀಮತಿ ವೀಣಾಶ್ರೀ ಕೆ. ಕೆ, ಪಂಚಾಯತ್ ಸದಸ್ಯರು ಶ್ರೀಮತಿ ವಸಂತಿ, ಶ್ರೀಮತಿ ಸುನಿತಾ, ಧರ್ಮಸ್ಥಳ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು ಶ್ರೀಮತಿ ಶಾಂಭವಿ ಹಾಗೂ ಟೈಲರಿಂಗ್ ತರಬೇತುದಾರರಾದ ಶ್ರೀಮತಿ ಸುಮತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಬಿರದಲ್ಲಿ ಒಟ್ಟು 40 ಮಂದಿ ಮಹಿಳಾ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಶ್ರೀನಿವಾಸ್ ರಾವ್ ರವರು ಮಾನ್ವಿಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟಕ್ಕೆ 3 ಹೊಲಿಗೆ ಯಂತ್ರ ನೀಡುವುದಾಗಿ ತಿಳಿಸಿದ್ದು ಇದು ಮಹಿಳಾ ಸಬಲೀಕರಣದತ್ತ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಕಾರ್ಯಕ್ರಮದಲ್ಲಿ ಕೃಷಿ ಸಖಿ ಶ್ರೀಮತಿ ಸುಚೇತಾ ಸ್ವಾಗತಿಸಿ, MBK ಶ್ರೀಮತಿ ಚಂದ್ರಾವತಿ ನಿರೂಪಿಸಿ, LCRP ಶ್ರೀಮತಿ ಪುಷ್ಪಾವತಿ ಧನ್ಯವಾದವಿತ್ತರು.






















