ಬೆಳ್ತಂಗಡಿ; ತಾಲೂಕಿನ ಕುಕ್ಕೇಡಿಯಲ್ಲಿ ನವೀಕರಣಗೊಂಡಿರುವ ಅಂಬೇಡ್ಕರ್ ಭವನದ ಉದ್ಘಾಟನೆಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆಗಮಿಸಲಿರುವುದಾಗಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.
ಜ. 17 ಶನಿವಾರದಂದು ಬೆಳಗ್ಗೆ ಮಂಗಳೂರಿಗೆ ಆಗಮಿಸುವ ಸಚಿವರು ಬಳಿಕ ಕುಕ್ಕೇಡಿಗೆ ಆಗಮಿಸಿ ಕುಕ್ಕೇಡಿಯ ಅಂಬೇಡ್ಕರ್ ಭವನದ ಉದ್ಘಾಟನೆ ನೆರವೇರಿಸಲಿದ್ದು ಬಳಿಕ 94ಸಿ ಹಕ್ಕುಪತ್ರ ವಿತರಣೆ ಮಾಡಲಿದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


























