ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಮಾಜಿ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡರನ್ನು ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ- ಕೇರಳ ಗಡಿಯಲ್ಲಿ ಪೊಲೀಸರು ರಾಜೀವ್ ಗೌಡರನ್ನು ಬಂಧಿಸಿಲಾಗಿದೆ ಎಂದು ವರದಿಯಾಗಿದೆ. ಸದ್ಯ ಅವರನ್ನು ಚಿಕ್ಕಬಳ್ಳಾಪುರಕ್ಕೆ ಕರೆತರಲಾಗುತ್ತಿದೆ ಎಂದು ವರದಿಯಾಗಿದೆ.
ಬ್ಯಾನರ್ ವಿಚಾರಕ್ಕೆ ಸಂಬಂಧಿಸಿ ಜ.12 ರಂದು ರಾಜೀವ್ ಗೌಡ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ್ದರು.
ಧಮ್ಕಿ ಹಾಕಿ, ನಿಂದಿಸಿದ್ದಕ್ಕೆ ರಾಜೀವ್ ಗೌಡ ವಿರುದ್ಧ ದೂರು ದಾಖಲಾಗಿತ್ತು. ಅವರು ಚಿಂತಾಮಣಿ ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿತ್ತು. ಜೊತೆಗೆ ಹೈಕೋರ್ಟ್ ನಲ್ಲಿ ತನ್ನ ವಿರುದ್ಧದ ಎಫ್ಐಆರ್ ರದ್ದುಗೊಳಿಸಬೇಕೆಂದು ಅರ್ಜಿ ಸಲ್ಲಿಸಿದ್ದರು. ಆದರೆ ಆ ಅರ್ಜಿಯೂ ವಜಾಗೊಂಡಿತ್ತು. ರಾಜೀವ್ ಗೌಡ ಬಂಧನಕ್ಕೆ ಲುಕ್‌ಔಟ್ ನೋಟಿಸ್ ಜಾರಿ ಆಗಿತ್ತು. ಪೊಲೀಸರು ಅವರ ಬಂಧನಕ್ಕೆ ಬಲೆ ಬೀಸಿದ್ದರು.
ರಾಜೀವ್ ಗೌಡ ಮಂಗಳೂರಿಗೆ ತೆರಳಿ ಸ್ನೇಹಿತರ ಬಳಿ ರಾಜೀವ್ ಗೌಡ ಆಶ್ರಯ ಪಡೆದಿದ್ದರು ಎನ್ನಲಾಗಿತ್ತು. ಪೊಲೀಸರಿಗೆ ಈ ಮಾಹಿತಿ ಸಿಕ್ಕ ಬಳಿಕ ಅವರು ಅಲ್ಲಿಂದ ಪರಾರಿ ಆಗಿದ್ದರು ಎನ್ನಲಾಗಿದೆ. ಈಗ ರಾಜೀವ್ ಗೌಡರನ್ನು ಬಂಧಿಸಲಾಗಿದೆ.

























