ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಅಜಿತ್ ಪವಾರ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು, ಆದರೆ ಅವರ ಜೀವವನ್ನು ಉಳಿಸಲಾಗಲಿಲ್ಲ. ವಿಮಾನದಲ್ಲಿ ಐದು ಜನರಿದ್ದರು, ಅವರಲ್ಲಿ ಯಾರನ್ನೂ ಉಳಿಸಲು ಸಾಧ್ಯವಾಗಲಿಲ್ಲ. ಅಜಿತ್ ಪವಾರ್ ಅವರ ಪಿಎಸ್ಒ ಸೇರಿದಂತೆ ಇಬ್ಬರು ಸಿಬ್ಬಂದಿ ಕೂಡ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಆರಂಭಿಕ ವರದಿಗಳ ಪ್ರಕಾರ, ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡಿಂಗ್ ಸಮಯದಲ್ಲಿ ನಿಯಂತ್ರಣ ಕಳೆದುಕೊಂಡು ಕ್ರ್ಯಾಶ್ ಲ್ಯಾಂಡಿಂಗ್ ಮಾಡಬೇಕಾಯಿತು. ಅಪಘಾತದಲ್ಲಿ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ . ಜಿಲ್ಲಾ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಇಂದು ಬುಧವಾರ ಬಾರಾಮತಿಯಲ್ಲಿ ಅಜಿತ್ ಪವಾರ್ ಅವರ ಹಲವಾರು ಸಭೆಗಳನ್ನು ನಿಗದಿಪಡಿಸಲಾಗಿತ್ತು ಅಲ್ಲಿಗೆ ಹೋಗುತ್ತಿದ್ದರು ಎನ್ನಲಾಗಿದೆ.
ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ (ಜನವರಿ 28) ಸಂಭವಿಸಿದ ಭೀಕರ ವಿಮಾನ ಅಪಘಾತದ ಸ್ಥಳವು ಅತ್ಯಂತ ಭೀಕರವಾಗಿದೆ. ನ್‌ವೇ ಮೇಲೆ ಅಪ್ಪಳಿಸಿದ ತಕ್ಷಣ ವಿಮಾನದಲ್ಲಿ ದೊಡ್ಡ ಮಟ್ಟದ ಸ್ಫೋಟ ಸಂಭವಿಸಿದ್ದರಿಂದ, ವಿಮಾನದ ಬಹುತೇಕ ಭಾಗ ಸುಟ್ಟು ಕರಕಲಾಗಿದೆ. ಕೇವಲ ವಿಮಾನದ ಬಾಲದ ಭಾಗ ಮತ್ತು ರೆಕ್ಕೆಗಳ ಕೆಲವು ಅವಶೇಷಗಳು ಮಾತ್ರ ಗುರುತಿಸಲು ಸಾಧ್ಯವಾಗುವಂತೆ ಉಳಿದಿವೆ. ವಿಮಾನ ಪತನವಾದ ರಭಸಕ್ಕೆ ಅದರ ಬಿಡಿಭಾಗಗಳು ರನ್‌ವೇ ಸುತ್ತಮುತ್ತ ನೂರಾರು ಮೀಟರ್‌ಗಳವರೆಗೆ ಚದುರಿಹೋಗಿವೆ. ಇಡೀ ಪ್ರದೇಶವು ಕಪ್ಪು ಹೊಗೆಯಿಂದ ಆವೃತವಾಗಿತ್ತು. ಅಗ್ನಿಶಾಮಕ ದಳದ ವಾಹನಗಳು ಬೆಂಕಿಯನ್ನು ನಂದಿಸಿವೆ. ಪ್ರಸ್ತುತ ಪೊಲೀಸ್ ಮತ್ತು ಎನ್‌ಡಿಆರ್‌ಎಫ್ (NDRF) ತಂಡಗಳು ವಿಮಾನದ ಅವಶೇಷಗಳ ಅಡಿಯಿಂದ ಮೃತದೇಹಗಳನ್ನು ಹೊರತೆಗೆಯುವ ಕೆಲಸದಲ್ಲಿ ತೊಡಗಿವೆ. ಈ ದುರಂತದಲ್ಲಿ ಅಜಿತ್ ಪವಾರ್ ಮತ್ತು ಇತರ ಐವರು ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ.


























