ಬೆಳ್ತಂಗಡಿ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಜರುಗಿದ 52ನೇ ವರ್ಷದ ಸಾಮೂಹಿಕ ವಿವಾಹದಲ್ಲಿ ಒಟ್ಟು 123 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದರೆ.
ಈ ಹಿಂದೆ ಕ್ಷೇತ್ರದ ಸಾಮೂಹಿಕ ವಿವಾಹದಲ್ಲಿ ಮದುವೆಯಾದವರ ಮಕ್ಕಳು, ಮೊಮ್ಮಕ್ಕಳು ಈ ಬಾರಿ ವಧೂ – ವರರಾಗಿ ಸಾಮೂಹಿಕ ವಿವಾಹವಾದರು. ದ.ಕ.ಜಿಲ್ಲೆಯಲ್ಲದೆ, ರಾಜ್ಯದ ತಮಿಳುನಾಡು ರಾಜ್ಯದ ವಧು-ವರರೂ ಈ ಸಾಮೂಹಿಕ ವಿವಾಹದಲ್ಲಿ ದಂಪತಿಯಾಗಿ ಹೊಸಜೀವನಕ್ಕೆ ಪಾದಾರ್ಪಣೆ ಮಾಡಿದರು. ಕೂಲಿ, ಬೇಸಾಯ, ವ್ಯಾಪಾರ, ಚಾಲಕ, ಖಾಸಗಿ ಉದ್ಯೋಗ, ಸರಕಾರಿ ಉದ್ಯೋಗ, ಮರದ ಕೆಲಸ, ಮೀನುಗಾರಿಕೆ ಮೊದಲಾದ ವೃತ್ತಿಯಲ್ಲಿ ತೊಡಗಿಕೊಂಡಿರುವ 123 ಜೋಡಿ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡರು. ಶ್ರೀಕ್ಷೇತ್ರ ಧರ್ಮಸ್ಥಳದಿಂದ ವರನಿಗೆ ಧೋತಿ, ಶಾಲು ಹಾಗೂ ವಧುವಿಗೆ ಸೀರೆ, ರವಿಕೆ ಮತ್ತು ಮಂಗಳಸೂತ್ರ ನೀಡಲಾಯಿತು.