ಪುತ್ತೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಪುತ್ತೂರು ಗ್ರಾಮ ಪಂಚಾಯತ್ ಕೋಡಿಂಬಾಡಿ, ಬಾಲವಿಕಾಸ ಸಮಿತಿ, ಅಂಗನವಾಡಿ ಕೇಂದ್ರ ಬೆಳ್ಳಿಪ್ಪಾಡಿ, ಸ್ತ್ರೀಶಕ್ತಿ ಸ್ವ-ಸಹಾಯ ಸಂಘಗಳು, ಪೋಷಕರು, ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಕಿಶೋರಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ ‘ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ–2026’ ಕಾರ್ಯಕ್ರಮವು ಫೆ.1ರಂದು ಬೆಳ್ಳಿಪ್ಪಾಡಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಅಂಗನವಾಡಿ ಪುಟಾಣಿಗಳು ಉದ್ಘಾಟಿಸಿ ಎಲ್ಲರ ಮನಸೆಳೆದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮಾತನಾಡಿ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಇಂತಹ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿದರು.
ಅಂಗನವಾಡಿ ಮಕ್ಕಳು, ಸ್ತ್ರೀಶಕ್ತಿ ಸ್ವ-ಸಹಾಯ ಸಂಘದ ಸದಸ್ಯರು, ಪೋಷಕರು ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ನೃತ್ಯ, ಹಾಡು, ನಾಟಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಸಂಘಟಕರಾದ ಬಾಲವಿಕಾಸ ಸಮಿತಿ, ಕಿಶೋರಿ ಸಂಘ, ಹಿರಿಯ ವಿದ್ಯಾರ್ಥಿ ಸಂಘ ಮತ್ತು ಸ್ತ್ರೀಶಕ್ತಿ ಸ್ವ-ಸಹಾಯ ಸಂಘದ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದ ಹಾಗೂ ಗ್ರಾಮಸ್ಥರು, ಪೋಷಕರು, ಮಕ್ಕಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

























