ನಗರ ಹೊರವಲಯದ ತೊಕ್ಕೊಟ್ಟು ಫ್ಲೈ ಓವರ್ ಮೇಲೆ ಇಂದು ಮುಂಜಾನೆ ( ಮಾರ್ಚ್. 27) ರೌಡಿಶೀಟರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.
ಮೃತ ವ್ಯಕ್ತಿಯನ್ನು ಆರಿಫ್ ಅಲಿಯಾಸ್ ಟ್ಯಾಬ್ಲೆಟ್ ಆರಿಫ್ (46) ಎಂದು ಗುರುತಿಸಲಾಗಿದೆ.
ಬರ್ಬರವಾಗಿ ಹತ್ಯೆ ವ್ಯಕ್ತಿಯು ಮುಳ್ಳುಗುಡ್ಡೆ, ತಲಪಾಡಿ ನಿವಾಸಿಯಾಗಿದ್ದು, ಈತನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ರೌಡಿಶೀಟರ್ ಪಟ್ಟಿಯಲ್ಲಿದ್ದ.
ಇಂದು ಬೆಳಗ್ಗೆ ಬುಲ್ಲೆಟ್ ಬೈಕಿನಲ್ಲಿ ಧಕ್ಕೆ ಕಡೆ ತೆರಳುತ್ತಿದ್ದಾಗ, ಹಿಂದಿನಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಯದ್ವ ತದ್ವ ದಾಳಿ ನಡೆಸಿ, ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಂತರ ಬಂದ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಮಂಗಳೂರು ದಕ್ಷಿಣ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿ ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.




























