ಪುತ್ತೂರು : ಹತ್ತೂರ ಒಡೆಯ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತವು ಏ. 01 ರಂದು ನಡೆಯಿತು.
ಗೊನೆ ಮುಹೂರ್ತವು ಬೆಳಿಗ್ಗೆ ಗಂಟೆ 9.15 ರ ವೃಷಭ ಲಗ್ನದಲ್ಲಿ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕರು ಗೊನೆ ಮುಹೂರ್ತವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪಕ ಸಮಿತಿ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ ಮತ್ತು ಸಮಿತಿ ಸದಸ್ಯರು ಹಾಗೂ ದೇವರ ಭಕ್ತಾದಿಗಳು ಉಪಸ್ಥಿತರಿದ್ದರು




























