• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ‘ಅಡ್ಡಣ ಪೆಟ್ಟು

May 5, 2024
ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

June 15, 2026
ಟ್ರಾಫಿಕ್‌ ನೆಪದಲ್ಲಿ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ರೇಪ್‌ಗೆ ಯತ್ನ – ಕಾಮುಕ  ಚಾಲಕನ ವಿರುದ್ಧ ಮಹಿಳೆ ದೂರು

ಅಮೆರಿಕ-ಇರಾನ್ ಶಾಂತಿ ಒಪ್ಪಂದ -108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ – ಹಾರ್ಮುಜ್‌ ಜಲಸಂಧಿ ಓಪನ್ ತೈಲ ಬೆಲೆಯಲ್ಲಿ ಭಾರಿ ಕುಸಿತ

ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

June 13, 2026
ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

June 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, June 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಸುಳ್ಯ

ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ‘ಅಡ್ಡಣ ಪೆಟ್ಟು

ಬಲು ವಿಶಿಷ್ಠ ಮಂಡೆಕೋಲಿನ ಈ ಅಡ್ಡಣಪೆಟ್ಟು ಆಚರಣೆ..!

by ಪ್ರಜಾಧ್ವನಿ ನ್ಯೂಸ್
May 5, 2024
in ಸುಳ್ಯ
0
ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ‘ಅಡ್ಡಣ ಪೆಟ್ಟು
74
SHARES
210
VIEWS
ShareShareShare

ಸುಳ್ಯ: ದೈವವೇ ಬಂದು ಜಗಳ ಬಿಡಿಸಿ ಸೌಹಾರ್ದತೆಯಿಂದ ಬಾಳಿ ಎಂಬ ಗತ ಕಾಲದ ದೈವ ಸಂದೇಶವನ್ನು ಇಂದಿಗೂ ಜನ ಮಾನಸಕ್ಕೆ ಮುಟ್ಟಿಸುವ ವಿಶಿಷ್ಟ ಆಚರಣೆ ಅಡ್ಡಣಪೆಟ್ಟು ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಪ್ರತಿ ವರ್ಷವೂ ನಡೆಯುತಿದೆ. ಮಂಡೆಕೋಲು ಗ್ರಾಮದ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ನಡೆಯುವ ಉಳ್ಳಾಕುಲು ಹಾಗೂ ಪರಿವಾರ ದೈವದ ನೇಮದ ಸಂದರ್ಭದ ನಡೆಯುವವಿಶಿಷ್ಟವಾದ ಅಡ್ಡಣ ಪೆಟ್ಟು ಎಂಬ ಹೊಡೆದಾಟದ ಸಂಪ್ರದಾಯ ಜಾತ್ರೋತ್ಸವದ ಪ್ರಮುಖ ಆಕರ್ಷಣೆ. ಶ್ರೀ ವಿಷ್ಣುಮೂರ್ತಿ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆದ ಮರುದಿನ ಉಳ್ಳಾಕುಲು ಹಾಗೂ ಪರಿವಾರ ದೈವದ ನೇಮ ನಡೆಯುವುದು ಸಂಪ್ರದಾಯ. ಶುಕ್ರಚಾರ ನಡೆದ ನೇಮದಲ್ಲಿ ಬೆಳಿಗ್ಗೆ ನಾಲ್ಕೂರಿನ ಪ್ರತಿನಿಧಿಗಳ ನಡುವೆ ತುಳುನಾಡಿನ ಅತ್ಯಂತ ಅಪರೂಪದಅಡ್ಡಣ ಪೆಟ್ಟು’ ಆಚರಣೆ ನಡೆಯಿತು. ಹಳೆ ಸಂಪ್ರದಾಯವನ್ನು ಪ್ರತಿನಿಧಿಸಿ ಸಾಂಕೇತಿಕವಾಗಿ ನಡೆಯುವ ಈ ಹೊಡೆದಾಟವನ್ನು ನೋಡಲು ನಾಡಿನ ವಿವಿಧೆಡೆಯಿಂದ ಭಕ್ತರು ಆಗಮಿಸಿದ್ದರು. ದೇವಸ್ಥಾನಕ್ಕೆ ಸಂಬಂಧಪಟ್ಟ ಕೇನಾಜೆ- ಮಾವಜಿ, ಮುರೂರು- ಬೊಳುಗಲ್ಲು ಎಂಬ ನಾಲ್ಕು ಗೌಡ ಮನೆತನಗಳು ಇಲ್ಲಿವೆ. ಉಳ್ಳಾಕುಲು ನೇಮದ ಸಂದರ್ಭ ಇದೇ ನಾಲ್ಕು ಮನೆತನದ ಪ್ರತಿನಿಧಿಗಳು ಬೆತ್ತದಿಂದ ತಯಾರಿಸಿದ ಗುರಾಣಿಯ ಮಾದರಿಯ ಅಡ್ಡಣವನ್ನು ಹಿಡಿದು ದಂಡದಿಂದ ಪರಸ್ಪರ ಹೊಡೆದಾಡಿಕೊಳ್ಳುತ್ತಾರೆ. ಉಳ್ಳಾಕುಲು ದೈವ ಬಂದು ಹೊಡೆದಾಟವನ್ನು ಬಿಡಿಸುತ್ತದೆ.
ಅಡ್ಡಣ ಪೆಟ್ಟಿನ ಇತಿಹಾಸ:
ಮಂಡೆಕೋಲು ನೇಮದಲ್ಲಿ ಅಡ್ಡಣ ಪೆಟ್ಟು ಸಂಪ್ರದಾಯಕ್ಕೆ ಬೇರೆ ಬೇರೆ ಐಹಿತ್ಯವಿದೆ. ಅಡ್ಡಣಪೆಟ್ಟು ನಡೆದರೆ ಊರಲ್ಲಿ ಮುಂದೆ ಗಲಾಟೆ, ಹೊಡೆದಾಟಗಳು ಸಂಭವಿಸುವುದಿಲ್ಲ ಎಂಬ ನಂಬಿಕೆಯೂ ಊರಿನ ಭಕ್ತ ಜನರಲ್ಲಿದೆ. ನಾಲ್ಕೂರಿನ ಜಗಳವನ್ನು ದೈವ ಬಿಡಿಸುವುದು, ಗಲಾಟೆ ಮಾಡದೆ ಸೌಹಾರ್ದದಿಂದ ಬಾಳಿ ಎನ್ನುವ ಸಂದೇಶವೂ ಈ ಆಚರಣೆಯಲ್ಲಿದೆ. ಪುರಾತನ ಕಾಲದಲ್ಲಿ ಯಾವುದೋ ಗಲಾಟೆ ನಡೆದ ಸಂದರ್ಭ ಉಳ್ಳಾಕುಲು ದೈವ ಬಂದು ಗಲಾಟೆ ಬಿಡಿಸಿ ಪರಸ್ಪರ ಸಂದಾನ ನಡೆಸಿತ್ತು ಎಂಬ ಪ್ರತೀತಿಯೂ ಇದೆ. ಇದೇ ಕಾರಣದಿಂದ ಪ್ರತಿ ವರ್ಷ ಉಳ್ಳಾಕುಲು ನೇಮದ ಸಂದರ್ಭ “ಅಡ್ಡಣ ಪೆಟ್ಟು” ಒಂದು ಸಂಪ್ರದಾಯವಾಗಿ ನಡೆದು ಬರುತ್ತಿದೆ.
ಆಚರಣೆ ಹೇಗೆ ?:
ನೇಮೋತ್ಸವ ದಿನದಂದು ಉಳ್ಳಾಕುಲು ದೈವದ ಭಂಡಾರ ತೆಗೆದ ಬಳಿಕ ದೈವ ಸಹಿತ ನಾಲ್ಕೂರಿನ ಪ್ರತಿನಿಧಿಗಳು, ದೈವರ ಪರಿಚಾರಕರು ದೇವಸ್ಥಾನದ ಸಮೀಪದ ಗದ್ದೆಯಲ್ಲಿರುವ ಕಟ್ಟೆಗೆ ತೆರಳುತ್ತಾರೆ. ಕೇನಾಜೆ- ಮಾವಜಿ, ಮುರೂರು-ಬೊಳುಗಲ್ಲು ಮನೆತನಕ್ಕೆ ಸೇರಿದ ನಾಲ್ವರು ಪ್ರತಿನಿಧಿಗಳು ಸಮವಸ್ತ್ರ ಧರಿಸಿ ದಂಡ ಮತ್ತು ಗುರಾಣಿ (ಅಡ್ಡಣ) ಹಿಡಿದು ದೈವದ ಜತೆಯಲ್ಲಿ ತೆರಳುತ್ತಾರೆ. ಕಟ್ಟೆಯ ಬಳಿ ತೆರಳಿದ ಬಳಿಕ ಕೆಲವೊಂದು ಸಂಪ್ರದಾಯ ಆಚರಣೆಗಳು ನಡೆದು ಅಡ್ಡಣ ಹಿಡಿದ ಯುವಕರು ಅಡ್ಡಣವನ್ನು ನೆಲದಲ್ಲಿ ಎದುರು ಬದುರಾಗಿ ಇಡುತ್ತಾರೆ. ಲಾಠಿ ಮಾದರಿಯ ಹೊಡೆಯುವ ದಂಡವನ್ನು ಕೈಯಲ್ಲಿ ಹಿಡಿದಿರುತ್ತಾರೆ.

ಇತ್ತ ಅಡ್ಡಣ ಹೊಡೆತದಲ್ಲಿ ಭಾಗವಹಿಸುವ ನಾಲ್ವರು ಯುವಕರಿಗೆ ಬೆನ್ನು ಹಾಕಿ ನಿಂತಿರುವ ಉಳ್ಳಾಕುಲು ದೈವಕ್ಕೆ ಅಣಿಯನ್ನು ಕೂರಿಸಲಾಗುತ್ತದೆ. ಅಣಿ ಇಟ್ಟ ಬಳಿಕ ತುಳು ನುಡಿಗಟ್ಟೊಂದನ್ನು ಹೇಳಲಾಗುತ್ತದೆ. ಈ ನುಡಿಗಟ್ಟು ಮುಗಿಯುತ್ತಿದ್ದಂತೆ ದೈವದ ಪರಿಚಾರಕರೊಬ್ಬರು ಅಡ್ಡಣ ಹೊಡೆತಕ್ಕೆ ಅಣಿಯಾಗಿ ನಿಂತಿರುವ ಯುವಕರತ್ತ ಕಲಶದ ನೀರಿನಿಂದ ಪ್ರೋಕ್ಷಣೆ ಮಾಡುತ್ತಾರೆ. ಕಲಶ ಪ್ರೋಕ್ಷಣೆ ಆಗುತ್ತಿದ್ದಂತೆ ಎದುರು ಬದುರಾಗಿ ನಿಂತಿರುವ ಯುವಕರು ನೆಲದಲ್ಲಿಟ್ಟ ಅಡ್ಡಣವನ್ನು ಕೈಗೆ ಎತ್ತಿಕೊಂಡು ಅದನ್ನು ಗುರಾಣಿಯಂತೆ ಹಿಡಿದು ಎದುರುಬದುರಾಗಿ ಹೊಡೆದಾಟ ಆರಂಭಿಸುತ್ತಾರೆ. ಪ್ರತಿಯೊಬ್ಬರೂ ಎದುರು ಪ್ರತಿನಿಧಿಯ ಕೈಯಲ್ಲಿ ಹಿಡಿದಿರುವ ಅಡ್ಡಣಕ್ಕೆ ಹೊಡೆಯಬೇಕೆಂಬ ನಿಯಮವೂ ಇದೆ. ಹೊಡೆದಾಟ ಜೋರಾಗುತ್ತಿದ್ದಂತೆ ಬೆನ್ನು ಹಾಕಿ ನಿಂತಿರುವ ಉಳ್ಳಾಕುಲು ದೈವ ಬಂದು ಹೊಡೆದಾಟವನ್ನು ಬಿಡಿಸುತ್ತದೆ.
ಪುರಾತನ ಸಂಪ್ರದಾಯದ ಮೂಲಕ ಶಾಂತಿ ಸಂದೇಶ ಸಾರುವ ಅಡ್ಡಣಪೆಟ್ಟು ಇಂದಿಗೂ ವಿಶೇಷ ಆಚರಣೆಯಾಗಿ ನೆಲೆ ನಿಂತಿದೆ.
ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆದ ಬಳಿಕ ಈ ಬಾರಿ ನಡೆಯುತ್ತಿದ್ದು ಜಾತ್ರೋತ್ಸವದ ಪ್ರಯುಕ್ತ ಮೇ.3ರಂದು ಉಳ್ಳಾಕುಲು ದೈವದ ನೇಮೋತ್ಸವ ಮತ್ತು ಅಡ್ಡಣಪೆಟ್ಟು ನಡೆಯಿತು. ಊರ ಹಾಗೂ ಪರವೂರ ಭಕ್ತರು ಅಡ್ಡಣಪೆಟ್ಟು ಕಣ್ತುಂಬಿಕೊಂಡರು.

Muliya

ಜಾಹೀರಾತು

Keshari Durga

ಜಾಹೀರಾತು

Photo by: D Kukaje

ashwinistudioputtur

ಜಾಹೀರಾತು

ಮೂಲ:ದಯಾ ಕುಕ್ಕಾಜೆ ಅವರ ಪೇಜ್ ನಿಂದ

SendShare30Share
Previous Post

ಕುಂಬ್ಳೆ ಸೀಮೆಯ ಪ್ರಧಾನ ದೈವ ಚಾಕಿರಿ ನಾಗಪ್ಪ ಪರವ ಪಡುಮಲೆ ನಿಧನ

Next Post

ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ..!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ..!

ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ..!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In