ಉಪ್ಪಿನಂಗಡಿ: ಬೈಕ್-ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಏ.29ರಂದು ನಡೆದಿದೆ.
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಎಂಬಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟಿಯಲ್ಲಿದ್ದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.




























