ಕನ್ನಡ ಚಿತ್ರರಂಗಕ್ಕೆ ಬೆಳ್ಳಂ ಬೆಳಗ್ಗೆ ಬಿಗ್ ಶಾಕ್ ಒಂದು ಎದುರಾಗಿದೆ. ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ ಅವರು ಅಕಾಲಿಕವಾಗಿ ನಿಧನರಾಗಿರುವುದು ನೋವಿನ ಸಂಗತಿ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ. ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿ ಮನೆಮಾತಾಗಿದ್ದ ದಿಲೀಪ್ ರಾಜ್ ಅವರು ಎಲ್ಲರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ನಿವಾಸದಲ್ಲಿ ದಿಲೀಪ್ ರಾಜ್ ಅವರ ಪಾರ್ಥೀವ ಶರೀರವನ್ನು ಇರಿಸಲಾಗಿದೆ. ಕಿರುತೆರೆ ಮತ್ತು ಚಿತ್ರರಂಗದ ಅನೇಕರು ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. 47ನೇ ವಯಸ್ಸಿಗೆ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿರುವುದನ್ನು ನಂಬಲು ಸಾಧ್ಯವಾಗುತ್ತಿಲ್ಲ.
ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ಮತ್ತಷ್ಟು ಫೇಮಸ್ ಆಗಿದ್ದ ನಟ 47ನೇ ಯಸ್ಸಿನಲ್ಲೇ ಕೊನೆಯುಸಿರೆಳೆದದ್ದು ಮಾತ್ರ ಶೋಚನೀಯ ಸಂಗತಿ. ಬೆಳ್ಳಿತೆರೆಯಲ್ಲಿ ದೊಡ್ಡ ಸಕ್ಸಸ್ ಸಿಗದಿದ್ರು ಕೂಡಾ ಕಿರುತೆರೆಯಲ್ಲಿ ನಟನಾಗಿ ನಿರ್ಮಾಪಕನಾಗಿ ಯಶಸ್ಸು ಕಂಡಿದ್ದಾರೆ. ಇದೀಗ ದಿಲೀಪ್ ರಾಜ್ ನಿಧನಕ್ಕೆ ಇಡೀ ಚಿತ್ರರಂಗವೇ ಬೆಚ್ಚಿಬಿದ್ದಿದೆ.





























