ಬೆಂಗಳೂರು: ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದ್ದು ಅದು ಬಿ ಕೆ ಹರಿಪ್ರಸಾದ್ ಅವರ ಪಾಲಾಗಿದೆ.
ಎಐಸಿಸಿ ವರಿಷ್ಠರು ಬಿ ಕೆ ಹರಿಪ್ರಸಾದ್ ಗೆ ಕರೆ ಮಾಡಿದ್ದು, ಎಂಎಲ್ಸಿ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇನ್ನು ಸಚಿನಸ್ಥಾನದ ನಿರೀಕ್ಷೆಯಲ್ಲಿದ್ದ ಬಿ ಕೆ ಹರಿಪ್ರಸಾದ್ ಅವರಿಗೆ ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಂತಾಗಿದೆ.
ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಕಾಂಗ್ರೆಸ್ ತನ್ನ ಪಾಲಿನ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಬಿ.ಕೆ.ಹರಿಪ್ರಸಾದ್, ಪಿ.ವಿ.ಮೋಹನ್, ಶಿವಣ್ಣ ಮಳವಳ್ಳಿ ಹಾಗೂ ತಿಪ್ಪಣ್ಣಪ್ಪ ಕಮಕನೂರು ಹೆಸರುಗಳು ಎಐಸಿಸಿ ಪ್ರಕಟಿಸಿದೆ. ಈ ಮೂಲಕ ಬಿ.ಕೆ.ಹರಿಪ್ರಸಾದ್ ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರನ್ನು ಮತ್ತೊಂದು ಅವಧಿಗೆ ಮುಂದುವರೆಸಿದ್ದು, ಇನ್ನುಳಿದ ಎರಡು ಸ್ಥಾನಗಳಿಗೆ ಹೊಸ ಮುಖಕ್ಕೆ ಮಣೆ ಹಾಕಲಾಗಿದೆ. ಇನ್ನು ನಾಲ್ಕು ಸ್ಥಾನಕ್ಕೂ ಒಬಿಸಿ ಸಮುದಾಯದವರಿಗೆ ಮಣೆ ಹಾಕಿರುವುದು ಅಚ್ಚರಿಕೆ ಕಾರಣವಾಗಿದೆ.























