ಪುತ್ತೂರು : ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯಾಧೀಶ ವಿಶ್ವಜೀತ್ ಶೆಟ್ಡಿಯವರು ಜೂ.12 ರಂದು ಭೇಟಿ ನೀಡಿ ಶ್ತೀದೇವರ ದರುಶನ ಪಡೆದರು.
ಬೆಳಿಗ್ಗೆ ದೇವಳಕ್ಕೆ ಭೇಟಿ ನೀಡಿದ ಅವರು ದೇವರ ಅಭಿಷೇಕಕ್ಕೆ ಶುದ್ದ ಎಳ್ಳೆಣ್ಣೆ ಸಮರ್ಪಣೆ ಮಾಡಿ, ತುಪ್ಪ ದೀಪ ಬೆಳಗಿಸಿದರು. ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ದೇವಳದ ಪ್ರಧಾನ ಅರ್ಚಕ ವೇ ಮೂ ವಿ ಎಸ್ ಭಟ್ ಅವರು ಪ್ರಸಾದ ನೀಡಿದರು.
ದೇವಳದ ಪ್ರಧಾನ ಅರ್ಚಕ ಈಶ್ವರ ಭಟ್ ಪಂಜಿಗುಡ್ಡೆ ಅವರು ನ್ಯಾಯಾಧೀಶರಿಗೆ ಶಾಲು ಹೊದೆಸಿ ಗೌರವಿಸಿದರು. ಈ ಸಂದರ್ಭ ಪುತ್ತೂರು 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್, 7 ನೇ ಹೆಚ್ಚುವರಿ ನ್ಯಾಯಾಧೀಶೆ ಸುಮಂಗಲ ಚಕಲಬ್ಬಿ, ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣಪುರ, ದೇವರಾಜ್ ವೈ ಹೆಚ್, ವಕೀಲರ ಸಂಘದ ಅಧ್ಯಕ್ಷ ಜಿ ಜಗನ್ನಾಥ ರೈ, ಶ್ದೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ದಿನೇಶ್ ಪಿ ವಿ, ಈಶ್ವರ ಬೆಡೇಕರ್, ಸುಭಾಶ್ ರೈ ಬೆಳ್ಳಿಪ್ಪಾಡಿ, ವಕೀಲರ ಸಂಘದ ಮಾಜಿ ಅಧ್ಯಕ್ಷ ದೇವಾನಂದ್, ಕೋರ್ಟ್ ನ ಪ್ರೊಟೊಕಾಲ್ ಅಧಿಕಾರಿಗಳಾದ ಪಾಂಡುರಂಗ, ವಿನೋದ್ ಮತ್ತಿತರರು ಉಪಸ್ಥಿತರಿದ್ದರು.

























