ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು.
ಈ ಕುರಿತು ಶಾಸಕ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ ಸುರಕ್ಷಿತ ಮತ್ತು ಸುಗಮ ಸಂಚಾರಕ್ಕೆ ಯಾವುದೇ ಅಡಚಣೆ ಉಂಟಾಗದಂತೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ವೆಟ್ ಮಿಕ್ಸ್ ಹಾಕಿ ರಸ್ತೆ ದುರಸ್ತಿ ಕಾರ್ಯ ಕೈಗೊಂಡಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗಿದೆ. ಶಾಶ್ವತ ದುರಸ್ತಿ ಕಾಮಗಾರಿಯನ್ನೂ ಶೀಘ್ರದಲ್ಲೇ ಕೈಗೊಳ್ಳಲಾಗುವುದು.
ಇತ್ತೀಚಿನ ಭಾರೀ ಮಳೆಯಿಂದ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ವೆಟ್ ಮಿಕ್ಸ್ ಹಾಕಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಜೊತೆಗೆ, ರಸ್ತೆಯಲ್ಲಿ ಶೇಖರಗೊಂಡ ಮಳೆನೀರು ಸರಾಗವಾಗಿ ಹರಿದು ಹೋಗುವಂತೆ ಅಗತ್ಯ ಚರಂಡಿ ನಿರ್ಮಾಣ ಕಾರ್ಯಕ್ಕೂ ಕ್ರಮ ಕೈಗೊಳ್ಳಲಾಗಿದೆ.
ಈ ರಸ್ತೆಯ ಮರುಡಾಮರೀಕರಣ ಕಾಮಗಾರಿಗಾಗಿ ಈಗಾಗಲೇ ರೂ.30 ಲಕ್ಷ ಅನುದಾನವನ್ನು ಮಂಜೂರು ಮಾಡಲಾಗಿದ್ದು, ಅಗತ್ಯ ಆಡಳಿತಾತ್ಮಕ ಅನುಮೋದನೆಯೂ ದೊರೆತಿದೆ. ಪ್ರಸ್ತುತ ಮಳೆಗಾಲ ಇರುವುದರಿಂದ ಶಾಶ್ವತ ಕಾಮಗಾರಿಯನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ತಾತ್ಕಾಲಿಕ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಮಳೆಗಾಲ ಮುಗಿದ ತಕ್ಷಣವೇ ರಸ್ತೆ ಮರುಡಾಮರೀಕರಣ ಕೈಗೊಳ್ಳಲಾಗುವುದು ಹರೀಶ್ ಪೂಂಜ
























