ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆಯ ಸಮಸ್ಯೆಯನ್ನು ಶೀಘ್ರ ಪರಿಹರಿಸಲು ಪುತ್ತಿಲ ಪರಿವಾರದ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ ಮನವಿ. ಪುತ್ತೂರು ನಗರ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಆಗದೆ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಹಾಗೂ ನಗರ ಭಾಗದಲ್ಲಿ ದಾರಿದೀಪಗಳು ಸಮರ್ಪಕ ನಿರ್ವಹಣೆಯಲ್ಲಿ ಇಲ್ಲದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಮನವಿ ಮಾಡಲಾಯಿತು.
ಈ ಕುರಿತು ಪುತ್ತೂರು ನಗರಸಭೆಯ ಪೌರಾಯುಕ್ತರಾದ ಶ್ರೀಮತಿ ವಿದ್ಯಾ ಕಾಳೆ, ಜಲಸಿರಿ ಯೋಜನೆಯ ಎ.ಡಬ್ಲ್ಯೂ. ಮಹಾಂತೇಶ್, ಕುಡಿಯುವ ನೀರಿನ ಮೇಲ್ವಿಚಾರಕರಾದ ವಸಂತ ನಾಯ್ಕ್ ಹಾಗೂ ಸಂಬಂಧಪಟ್ಟ ಇಂಜಿನಿಯರ್‌ಗಳೊಂದಿಗೆ ಚರ್ಚಿಸಿ, ನಗರದಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಹಾಗೂ ಬೀದಿದೀಪಗಳ ಸಮಸ್ಯೆಗಳನ್ನು ಕೂಡಲೇ ಪರಿಶೀಲಿಸಿ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ತುರ್ತಾಗಿ ಸೂಕ್ತ ಕ್ರಮ ಕೈಗೊಂಡು ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಸೂಚಿಸಲಾಯಿತು.
ನಗರದ ಸಾರ್ವಜನಿಕರಿಗೆ ಸಮರ್ಪಕ ಹಾಗೂ ನಿರಂತರ ಕುಡಿಯುವ ನೀರು ದೊರೆಯುವಂತೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರಿಂದ ಬರುವ ಕುಡಿಯುವ ನೀರಿನ ಸಮಸ್ಯೆಗಳ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಒದಗಿಸುವಂತೆ ಮನವಿ ಮಾಡಲಾಗಿದೆ.
ಈ ಸಂದರ್ಭದಲ್ಲಿ ಪುತ್ತಿಲ ಪರಿವಾರದ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ,ಟ್ರಸ್ಟ್ ನ ಪದಾಧಿಕಾರಿಗಳಾದ ಉಮೇಶ್ ಕೋಡಿಬೈಲು,ಪ್ರಶಾಂತ್ ನೆಕ್ಕಿಲಾಡಿ,ರಾಜು ಶೆಟ್ಟಿ,ರವಿ ಆಚಾರ್ಯ,ದಯಾನಂದ ಆಚಾರ್ಯ,ಕಿಶೋರ್ ಪಡ್ಡಾಯೂರು,ಮನೀಶ್ ಕುಲಾಲ್ ಉಪಸ್ಥಿತರಿದ್ದರು.
























