ಪುತ್ತೂರು: ಉಡುಪಿ ನಗರಸಭೆಯಲ್ಲಿ ಕಿರಿಯ ಅಭಿಯಂತರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ದಿವಾಕರ ರವರನ್ನು ವಾರದಲ್ಲಿ ಎರಡು ದಿನ ಪುತ್ತೂರು ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಹೆಚ್ಚುವರಿ ಪ್ರಭಾವ ನೀಡಿ ಆದೇಶಿಸಲಾಗಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ, ಕೆ.ದಿವಾಕರ ಅವರು ಪುತ್ತೂರು ನಗರಸಭೆಯಲ್ಲಿ ಖಾಲಿ ಇರುವ ಕಿರಿಯ ಅಭಿಯಂತರ ಹುದ್ದೆಯಲ್ಲಿ ವಾರದಲ್ಲಿ ಎರಡು ದಿನ ಕರ್ತವ್ಯ ನಿರ್ವಹಿಸಲು ಕರ್ನಾಟಕ ನಾಗರಿಕ ಸೇವಾ ನಿಯಮಗಳು ನಿಯಮ-68 ರಡಿ ಹೆಚ್ಚುವರಿ ಪ್ರಭಾರದಲ್ಲಿರಿಸಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಮಹಾಂತಪ್ಪ ಎಸ್.ತುರಕನೂರ ಆದೇಶಿಸಿದ್ಧಾರೆ.
























