ಕೊಲ್ಲಮೊಗ್ರು : ಅ 11 ಯುವಜನ ಸಂಯುಕ್ತ ಮಂಡಳಿ (ರಿ.), ಸುಳ್ಯ, ಚೈತನ್ಯ ಯುವತಿ ಮಂಡಲ, ಕೊಲ್ಲಮೊಗ್ರು, ಮಹಾತ್ಮ ಯುವಕ ಮಂಡಲ, ಕೊಲ್ಲಮೊಗ್ರು, ಕೆವಿಜಿ ಅನುದಾನಿತ ಪ್ರೌಢಶಾಲೆ, ಕೊಲ್ಲಮೊಗ್ರು ಇವುಗಳ ಜಂಟಿ ಆಶ್ರಯದಲ್ಲಿ ಆಟಿದ ಕೂಟ -2026 ಕಾರ್ಯಕ್ರಮ ಕೊಲ್ಲಮೊಗ್ರು ಕೆ.ವಿ.ಜಿ ಪ್ರೌಢಶಾಲಾ ವಾಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಶಾಲಾ ಆವರಣದಲ್ಲಿ ನಿರ್ಮಿಸಲಾದ ಗದ್ದೆಯಲ್ಲಿ ಯುವತಿ ಮಂಡಲದ ಸದಸ್ಯರು ನೇಜಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಬೆಳ್ಯಪ್ಪ ಗೌಡ ಪೈಕ ಅವರು ಕಳಸಿಗೆಗೆ ಭತ್ತ ಸುರಿಯುವ ಮೂಲಕ ಉದ್ಘಾಟಿಸಿದರು.ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ಪವನ್ ಪಲ್ಲತಡ್ಕರವರು ಸಭಾಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕಮಲಾಕ್ಷ ಗೌಡ ಮುಳುಬಾಗಿಲು, ಯುವಜನ ಸಂಯುಕ್ತ ಮಂಡಳಿಯ ಉಸ್ತುವಾರಿ ನಿರ್ದೇಶಕರಾದ ದಿನೇಶ್ ಹಾಲೆಮಜಲು, ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ ಮೂಕಮಲೆ, ಚೈತನ್ಯ ಯುವತಿ ಮಂಡಲದ ಅಧ್ಯಕ್ಷೆ ಶ್ರೀಮತಿ ಗಾಯತ್ರಿ,ಯುವತಿ ಮಂಡಲದ ಸ್ಥಾಪಕ ಅಧ್ಯಕ್ಷೆ ಶ್ರೀಮತಿ ಯಶೋಧ ಅಂಬೆಕಲ್ಲು, ಮಂಡಳಿಯ ಪ್ರಧಾನ ಕಾರ್ಯದರ್ಶಿ ಮುರಳಿ ನಳಿಯಾರು, ಮಂಡಳಿಯ ಪೂರ್ವ ಅಧ್ಯಕ್ಷರರಾದ ಪ್ರವೀಣ್ ಕುಮಾರ್ ಜಯನಗರ ಇವರುಗಳು ಉಪಸ್ಥಿತರಿದ್ದರು.
ಆಟಿ ತಿಂಗಳ ವಿಶೇಷಯತೆಯನ್ನು ಪರಿಚಯಿಸುವ ಚಟುವಟಿಕೆಗಳು,ಆಟಿ ಖಾದ್ಯ ಪ್ರದರ್ಶನ,ಮಕ್ಕಳು ಹಾಗೂ ಯುವತಿ ಮಂಡಲದ ಸದಸ್ಯರು ಆಟಿ ತಿಂಗಳಲ್ಲಿ ಬಳಸುವ 30ಕ್ಕೂ ಹೆಚ್ಚು ಸಾಂಪ್ರದಾಯಿಕ ಖಾದ್ಯಗಳನ್ನು ಪ್ರದರ್ಶನಕ್ಕಿಟ್ಟಿದ್ದರು. ಅತ್ಯುತ್ತಮ ಖಾದ್ಯಗಳಿಗೆ ಬಹುಮಾನ ವಿತರಿಸಲಾಯಿತು.

ಮಕ್ಕಳು ಮತ್ತು ಸಾರ್ವಜನಿಕರಿಗೆ ಆಟಿ ಆಚರಣೆಯ ಕುರಿತು ಭಾಷಣ ಸ್ಪರ್ಧೆ ಹಾಗೂ ಸೌಹಾರ್ದಯುತ ಹಗ್ಗಜಗ್ಗಾಟ ಸ್ಪರ್ಧೆ ನಡೆಯಿತು.
ಪುರಾತನ ವಸ್ತುಗಳು ಹಳೆಯ ಕಾಲದಲ್ಲಿ ದಿನನಿತ್ಯದ ಕೆಲಸಗಳಿಗೆ ಬಳಸುತ್ತಿದ್ದ ಅಪರೂಪದ ವಸ್ತುಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸಿದ್ದಕ್ಕಾಗಿ ಯುವಜನ ಸಂಯುಕ್ತ ಮಂಡಳಿ, ಯುವಕ ಹಾಗೂ ಯುವತಿ ಮಂಡಲದ ಅಧ್ಯಕ್ಷರಿಗೆ ಶಾಲು ಹೊದಿಸಿ, ಸನ್ಮಾನಿಸಿ ಗೌರವಿಸಲಾಯಿತು.
ಶಾಲಾ ನಿವೃತ್ತ ಶಿಕ್ಷಕರಾದ ವೆಂಕಟರಮಣ ಗೌಡ ಕೊಪ್ಪಡ್ಕ ಕಾರ್ಯಕ್ರಮ ನಿರೂಪಿಸಿ,ದಿನೇಶ್ ಹಾಲೆಮಜಲು ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು,
ಹರೀಶ್ ಬಳ್ಳಡ್ಕ ವಂದಿಸಿದರು.
ಶಿಕ್ಷಕವೃಂದ, ಶಾಲಾಭಿವೃದ್ಧಿ ಸಮಿತಿ, ಸಂಘ ಸಂಸ್ಥೆಗಳ ಪದಾಧಿಕಾರಿಗಳು,ವಿದ್ಯಾರ್ಥಿಗಳು ಹಾಗೂ ಪೋಷಕ ವೃಂದ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಯಶಸ್ವಿಯಾಗಿ ಸಂಪನ್ನಗೊಂಡಿತು.
























