ಪುತ್ತೂರು: ಭಾರತದ 80ನೇ ಸ್ವಾತಂತ್ರ್ಯೋತ್ಸವ ಹಾಗೂ ವಂದೇ ಮಾತರಂ ಗೀತೆಯ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ವತಿಯಿಂದ ಆ.14ರಂದು ಪುತ್ತೂರಿನಲ್ಲಿ ಬೃಹತ್ ಹಿಂದೂ ಮೆರವಣಿಗೆ ಹಾಗೂ ಭಾರತ ಮಾತಾ ಪೂಜನಾ ಕಾರ್ಯಕ್ರಮ ನಡೆಯಲಿದೆ.
ಆ.14ರ ಶುಕ್ರವಾರ ಸಂಜೆ 7 ಗಂಟೆಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮವೂ ನಡೆಯಲಿದೆ. ದೇಶಭಕ್ತಿ ಮತ್ತು ರಾಷ್ಟ್ರಾಭಿಮಾನವನ್ನು ಬಿಂಬಿಸುವ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಸಂಘಟನೆಗಳ ವತಿಯಿಂದ ಮನವಿ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ವಿವಿಧ ಹಿಂದೂ ಸಂಘಟನೆಗಳ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ದೇಶಭಕ್ತಿ, ರಾಷ್ಟ್ರೀಯ ಏಕತೆ ಮತ್ತು ಸಮಾಜದಲ್ಲಿ ರಾಷ್ಟ್ರಾಭಿಮಾನದ ಸಂದೇಶವನ್ನು ಸಾರುವ ಉದ್ದೇಶ ಹೊಂದಲಾಗಿದೆ.
























