ಪುತ್ತೂರು: ಬಿ. ನಾಗೇಂದ್ರ ಅವರ ಸಚಿವ ಸ್ಥಾನಕ್ಕೆ ಸಂಬಂಧಿಸಿದ ವಿಚಾರ ಹಾಗೂ ರಾಜ್ಯ ಸರ್ಕಾರದ ವಿವಿಧ ವೈಫಲ್ಯಗಳ ವಿರುದ್ಧ ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ಪುತ್ತೂರು ನಗರ ಮಂಡಲದ ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ ಇಂದು ನಡೆಯಿತು.
ಸಭೆಯಲ್ಲಿ ಬಿ. ನಾಗೇಂದ್ರ ಅವರ ಸಚಿವ ಸ್ಥಾನಕ್ಕೆ ಸಂಬಂಧಿಸಿದ ವಿಚಾರಗಳು ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ವೈಫಲ್ಯಗಳ ವಿರುದ್ಧ ಕೈಗೊಳ್ಳಲಿರುವ ಹೋರಾಟ ಮತ್ತು ಪ್ರತಿಭಟನಾ ಕಾರ್ಯಕ್ರಮಗಳ ಕುರಿತು ಪ್ರಮುಖವಾಗಿ ಚರ್ಚಿಸಲಾಯಿತು.
ಮುಂದಿನ ದಿನಗಳಲ್ಲಿ ನಡೆಯಲಿರುವ ಪ್ರತಿಭಟನೆಗಳು ಹಾಗೂ ಹೋರಾಟದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಪಕ್ಷದ ಪ್ರಮುಖರು ಹಾಗೂ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು.
ಹೋರಾಟವನ್ನು ಪರಿಣಾಮಕಾರಿಯಾಗಿ ಸಂಘಟಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಭಾಗವಹಿಸುವಂತೆ ಮಾಡುವ ಕುರಿತು ಸಭೆಯಲ್ಲಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.
























