ಪುತ್ತೂರು: ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು ದರ್ಬೆ ಅಂಗಡಿಯೊಂದರಲ್ಲಿ ಆ.21 ರಂದು ನಡೆದ ಘಟನೆಗೆ ಸಂಬಂಧಿಸಿ ಚಿಕ್ಕಮುಡ್ನೂರು ಗ್ರಾಮದ ನೌಶಾದ್ (30ವ) ಎಂಬವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದರ್ಬೆ ಘಟನೆಗೆ ಸಂಬಂಧಿಸಿ ಕೆಲವರನ್ನು ಪೊಲೀಸರು ಜೀಪಿನಲ್ಲಿ ಕರೆತರಲು ಯತ್ನಿಸಿದ ವೇಳೆ ನೌಶಾದ್ ಎಂಬವರು ಪೊಲೀಸ್ ಜೀಪಿನೊಳಗಿದ್ದ ವ್ಯಕ್ತಿಯನ್ನು ಎಳೆದಾಡುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದ್ದು ಈ ಕುರಿತು ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದು, ಬೇರೆ ಪ್ರಕರಣಗಳ ಬಗ್ಗೆ ಪರಿಶೀಲಿಸಲಾಗುತ್ತಿದೆ. ಪ್ರಸ್ತುತ ದಸ್ತಗಿರಿ ಮಾಡಿರುವುದಿಲ್ಲ. ಘಟನೆಗೆ ಸಂಬಂಧಿಸಿದ ವಿಡಿಯೋಗಳ ಪರಿಶೀಲನೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
























