ಪುತ್ತೂರು: ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಶಾಸಕ ಅಶೋಕ್ ಕುಮಾರ್ ರೈ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಗಾಯಾಳು ಮುಬಾರಿಶ್ ಮೆಡ್ ಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಶಾಸಕ ಅಶೋಕ್ ರೈ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಪುತ್ತೂರು ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿರುವ ಸಂಜನಾ ಪೈ ಅವರನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಗ್ಯಾರೆಂಟಿ ಯೋಜನೆ ತಾಲೂಕು ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ, ಪಾರೂಕ್ ಬಾಯಬೆ, ಜಯಪ್ರಕಾಶ್ ಬದಿನಾರು, ಜೋಕಿಂ ಡಿಸೋಜ ಸಹಿತ ಹಲವಾರು ಮಂದಿ ಜೊತೆಗಿದ್ದರು.























