ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮಿಯಾರುನಲ್ಲಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.09ರಂದು ಸಂಜೆ ನಡೆದಿದೆ.
ಮೃತ ಯುವತಿಯನ್ನು ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡ ಮನೆ ನಿವಾಸಿ ಅಣ್ಣಿ ಗೌಡ ಮತ್ತು ಮಾಲತಿ ದಂಪತಿಗಳ ಮಗಳು ಲಿಶ್ಮಿತ ಗೌಡ (20) ಎಂದು ಗುರುತಿಸಲಾಗಿದೆ. ಈಕೆ ನಡ ಸರ್ಕಾರಿ ಕಾಲೇಜಿನಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದಳು. ಅನಾರೋಗ್ಯದ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಸ್ಥಳೀಯರ ಸಹಕಾರದೊಂದಿಗೆ ಮೃತದೇಹವನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.ಘಟನೆ ಬಗ್ಗೆ ಮಾಹಿತಿ ತಿಳಿದು ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

























