ಪುತ್ತೂರು: ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ, ಕರಾವಳಿ ಭಾಗದ ಒಕ್ಕಲಿಗರ ಸೇವಾ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಸಮಾಲೋಚನೆ ನಡೆಸಿದರು.
ಮಾಜಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಸುಂದರ ಗೌಡ ನಡುಬೈಲು, ಅಮರಾನಾಥ್ ಗೌಡ, ದೀರಾಜ್ ಗೌಡ ಕೊಡಿಪ್ಪಾಡಿ, ಶ್ರೀ ಯತೀಶ್ ದೇವ ಸಂಟ್ಯಾರು , ಜಿಲ್ಲಾ CCP ಸಂಯೋಜಕರಾದ ಶ್ರೀ ಪ್ರಸನ್ನ ಕುಮಾರ್ ಡಿ. ಆರ್. ಕಿರಣ್ ಬುಡ್ಲೆ ಗುತ್ತು, ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಹಳೆಕೋಟೆ ಇದರ ಗೌರವಾಧ್ಯಕ್ಷ ಹೆಚ್. ಪದ್ಮಗೌಡ, ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಉಪಾಧ್ಯಕ್ಷ ನಾರಾಯಣ ಗೌಡ, ನಿರ್ದೇಶಕರಾದ ಜಯಾನಂದ ಗೌಡ ಪ್ರಜ್ವಲ್ ಸೇರಿದಂತೆ ಕರಾವಳಿ ಭಾಗದ ವಿವಿಧ ತಾಲೂಕುಗಳ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

























