ಬಂಟ್ವಾಳ : ಸೆ.19ರಂದು ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ನೆ ಎಂಬಲ್ಲಿ ಇಲ್ಲಿನ ನಿವಾಸಿ ಸಿನಾನ್ (32) ಹಾಗೂ ಪತ್ನಿ ನೂರುನ್ನಿಸಾ (28) ನಡುವೆ ಫೋನ್ ಕರೆಯಲ್ಲಿ ವೈವಾಹಿಕ ಕಲಹ ನಡೆದಿದೆ. ಕೋಪಗೊಂಡ ಪತ್ನಿ ನೂರುನ್ನಿಸಾ, ಮನೆಯಲ್ಲಿದ್ದ ತನ್ನ ಮೂರುವರೆ ವರ್ಷದ ಮಗು ಹಾಗೂ ಪತಿಯ ತಂಗಿಯ ಮೂರು ವರ್ಷದ ಮಗುವನ್ನು ಮನೆ ಸಮೀಪದ ಬಾವಿಗೆ ಎಸೆದಿದ್ದಾಳೆ ಎಂದು ಆರೋಪಿಸಲಾಗಿದೆ.
ಸ್ಥಳೀಯರು ತಕ್ಷಣ ಕಾರ್ಯಪ್ರವೃತ್ತರಾಗಿ ಮಕ್ಕಳನ್ನು ಮೇಲಕ್ಕೆ ಎತ್ತಿದ್ದಾರೆ. ಆದರೆ ಪತಿಯ ತಂಗಿಯ ಮಗು ಮೃತಪಟ್ಟಿದ್ದು, ಆರೋಪಿತೆಯ ಮಗುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರಂ 121/2026 ದಾಖಲಾಗಿದ್ದು, ಆರೋಪಿತೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
























