• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

September 24, 2026
ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

September 24, 2026
ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

September 24, 2026
ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

September 24, 2026
ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

September 23, 2026
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

September 23, 2026
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

September 23, 2026
ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

September 23, 2026
ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

September 22, 2026
ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

    ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

    ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

    ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

by ಪ್ರಜಾಧ್ವನಿ ನ್ಯೂಸ್
September 24, 2026
in ಜಿಲ್ಲೆ, ದಕ್ಷಿಣ ಕನ್ನಡ, ಮಂಗಳೂರು, ರಾಜಕೀಯ, ರಾಜ್ಯ
0
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ
14
SHARES
39
VIEWS
ShareShareShare

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ
ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ
 ಹಿರಿಯ ಮುಖಂಡ ಜನಾರ್ದನ ಪೂಜಾರಿ ಸಮ್ಮುಖದಲ್ಲಿ ನೂತನ ಸಾರಥಿಯಾಗಿ ಅಧಿಕಾರ ಸ್ವೀಕಾರ

8722552464 Astrloger

ಜಾಹೀರಾತು

ಜಾಹೀರಾತು

ಮಂಗಳೂರು: ಕಾಂಗ್ರೆಸ್ ಪಕ್ಷವೆಂದರೆ ಕೇವಲ ರಾಜಕೀಯ ಶಕ್ತಿಯಲ್ಲ, ಅದು ಕೋಟ್ಯಂತರ ಸಾಮಾನ್ಯ ಜನರ ಆಶಯಗಳಿಗೆ ಧ್ವನಿಯಾಗಿರುವ ಮಹಾನ್ ಚಳವಳಿ. ಜನರ ಮುಂದಿನ ಆಶಾಭಾವನೆಯೇ ಕಾಂಗ್ರೆಸ್ ಆಗಿದ್ದು, ಪಕ್ಷಕ್ಕಾಗಿ ತಳಮಟ್ಟದಲ್ಲಿ ದುಡಿಯುವ ಕಟ್ಟಕಡೆಯ ಕಾರ್ಯಕರ್ತನಿಗೂ ಸೂಕ್ತ ಗೌರವ ಮತ್ತು ಶಕ್ತಿ ತುಂಬುವ ಮೂಲಕ ಬೂತ್ ಮಟ್ಟದಿಂದ ಪಕ್ಷವನ್ನು ಮರುಸಂಘಟಿಸಲಾಗುವುದು. ಹಿರಿಯ ನಾಯಕರ ಮಾರ್ಗದರ್ಶನ ಹಾಗೂ ಎಲ್ಲರನ್ನೂ ಒಟ್ಟಾಗಿ ಕೊಂಡೊಯ್ಯುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಷದ ಗತವೈಭವವನ್ನು ಮರುಕಳಿಸುವಂತೆ ಶ್ರಮಿಸುತ್ತೇನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಘೋಷಿಸಿದರು.
ಗುರುವಾರ ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ (ಕಾಂಗ್ರೆಸ್ ಭವನ) ಆಯೋಜಿಸಲಾಗಿದ್ದ ಅದ್ಧೂರಿ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷ ಹರೀಶ್ ಕುಮಾರ್ ಅವರಿಂದ ಅವರು ಅಧಿಕಾರ ಸ್ವೀಕರಿಸಿ ಮಾತನಾಡಿದರು.
ನವೆಂಬರ್‌ನಲ್ಲಿ ಬೃಹತ್ ಸಮಾವೇಶ:
ತಮ್ಮ ಮುಂದಿನ ಕಾರ್ಯಯೋಜನೆಗಳನ್ನು ಹಂಚಿಕೊಂಡ ಪದ್ಮರಾಜ್, ನನ್ನ ಮೇಲೆ ನಂಬಿಕೆಯಿಟ್ಟು ಪಕ್ಷದ ದೊಡ್ಡ ಜವಾಬ್ದಾರಿ ನೀಡಲಾಗಿದೆ. ಕಾರ್ಯಕರ್ತರ ನಿರೀಕ್ಷೆ ಹುಸಿಯಾಗದಂತೆ ನೋಡಿಕೊಳ್ಳುವುದು ನನ್ನ ಕರ್ತವ್ಯ. ಮುಂದಿನ 8 ದಿನಗಳಲ್ಲಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದ ಬೂತ್‌ಗಳಿಗೆ ಖುದ್ದಾಗಿ ಭೇಟಿ ನೀಡಿ, ಬೂತ್ ಅಧ್ಯಕ್ಷರು ಹಾಗೂ ಸ್ಥಳೀಯ ಕಾರ್ಯಕರ್ತರನ್ನು ನೇರವಾಗಿ ಭೇಟಿಯಾಗಿ ಅವರ ಶ್ರಮವನ್ನು ಗುರುತಿಸಿ ಬೆನ್ನಿಗೆ ನಿಲ್ಲಲಿದ್ದೇನೆ. ಬೂತ್ ಮಟ್ಟದಿಂದ ಜಿಲ್ಲಾ ಮಟ್ಟದವರೆಗಿನ ಎಲ್ಲ ಕಾರ್ಯಕರ್ತರನ್ನು ಒಗ್ಗೂಡಿಸಿ ಸೂಕ್ತ ವೇದಿಕೆ ಕಲ್ಪಿಸಲು ನವೆಂಬರ್ ಮೊದಲ ವಾರದಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗುವುದು, ಎಂದು ತಿಳಿಸಿದರು.
* ತುಳು ಭಾಷೆಗೆ ಮಾನ್ಯತೆ ಕಾಂಗ್ರೆಸ್ ಹೆಗ್ಗಳಿಕೆ:
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳಿಗೆ 32,000 ಕೋಟಿ ಅನುದಾನ ಮೀಸಲಿಟ್ಟಿರುವುದು ಪ್ರಮುಖ ಮೈಲಿಗಲ್ಲು. ಇದಕ್ಕಿಂತ ಹೆಚ್ಚಾಗಿ ಕರಾವಳಿಯ ಬಹುಕಾಲದ ಕನಸಾದ ತುಳು ಭಾಷೆಗೆ ಎರಡನೇ ಅಧಿಕೃತ ಆಡಳಿತ ಭಾಷೆಯ ಮಾನ್ಯತೆ ನೀಡಿದ ಐತಿಹಾಸಿಕ ಹೆಗ್ಗಳಿಕೆ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ. ಈ ಸಾಧನೆಗಳನ್ನು ಪ್ರತಿಯೊಂದು ಮನೆ-ಮನಗಳಿಗೆ ತಲುಪಿಸಲಾಗುವುದು. ಕಾಂಗ್ರೆಸ್ ಸರ್ಕಾರವು ಕಾರ್ಯಕರ್ತರು ತಲೆ ಎತ್ತಿ ನಿಲ್ಲುವಂತಹ ಆಡಳಿತ ನೀಡುತ್ತಿದ್ದು, ವಿಪಕ್ಷಗಳ ಟೀಕೆಗೆ ಹಿಂಜರಿಯದೆ, ಹೊಗಳಿಕೆಗೆ ಹಿಗ್ಗದೆ ಮುನ್ನಡೆಯಬೇಕು. ಬಿಜೆಪಿ ಆಡಳಿತದಿಂದ ಬೇಸತ್ತು ಮರಳಿ ಕಾಂಗ್ರೆಸ್‌ಗೆ ಬರುತ್ತಿರುವ ಮುಖಂಡರು ಮತ್ತು ಸಾರ್ವಜನಿಕರನ್ನು ವಿಶ್ವಾಸಕ್ಕೆ ಪಡೆದು ಪಕ್ಷವನ್ನು ಬಲಪಡಿಸುತ್ತೇವೆ, ಎಂದರು.
* ಎಲ್ಲ ಕ್ಷೇತ್ರಗಳಲ್ಲೂ ಗೆಲುವಿನ ಗುರಿ ಎಲ್ಲರ ಹೊಣೆ: ಹರೀಶ್ ಕುಮಾರ್
ನಿರ್ಗಮಿತ ಅಧ್ಯಕ್ಷ ಹರೀಶ್ ಕುಮಾರ್ ಅವರನ್ನು ಇದೇ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಮ್ಮಾನಿಸಲಾಯಿತು. ಬಳಿಕ ಮಾತನಾಡಿದ ಅವರು, ಪದ್ಮರಾಜ್ ವಿದ್ಯಾರ್ಥಿ ದೆಸೆಯಿಂದಲೇ ಪಕ್ಷಕ್ಕಾಗಿ ದುಡಿದವರು. ಕಳೆದ ಎರಡೂವರೆ ವರ್ಷಗಳಲ್ಲಿ ಪ್ರತಿ ಬ್ಲಾಕ್‌ಗೆ ಭೇಟಿ ನೀಡಿ ಪಕ್ಷ ಕಟ್ಟಿದ ಪರಿಣಾಮ ಇಂದು ಕಾರ್ಯಕರ್ತರಿಂದಲೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ದೊಡ್ಡ ಜವಾಬ್ದಾರಿ ನಿರ್ವಹಿಸುವಾಗ ಮಾತೃ ಹೃದಯದ ಮಮತೆಯೂ ಬೇಕು, ಸಂಘಟನೆಯ ಹಿತದೃಷ್ಟಿಯಿಂದ ವಜ್ರದಂತಹ ಕಠೋರ ನಿರ್ಧಾರಗಳೂ ಅನಿವಾರ್ಯ. ನಮ್ಮೊಳಗಿನ ಒಡಕಿನಿಂದಲೇ ನಮಗೆ ಹಿನ್ನಡೆಯಾಗಿದ್ದು, ಇನ್ನು ಮುಂದೆ ಒಗ್ಗಟ್ಟು ಪ್ರದರ್ಶಿಸಬೇಕಿದೆ. ಮುಂಬರುವ ಚುನಾವಣೆಗಳಲ್ಲಿ ಜಿಲ್ಲೆಯ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಾವುಟ ಹಾರಿಸಲು ಪ್ರತಿಯೊಬ್ಬರೂ ಸೈನಿಕನಂತೆ ಶ್ರಮಿಸಬೇಕು. ಚುನಾವಣೆಯಲ್ಲಿ ಪಕ್ಷ ಗೆಲ್ಲಿಸುವುದು ಕೇವಲ ಅಧ್ಯಕ್ಷರೊಬ್ಬರ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ಕಾಂಗ್ರೆಸಿಗನ ಕರ್ತವ್ಯ, ಎಂದು ಕರೆ ನೀಡಿದರು.
* ಪಕ್ಷದ ಹುದ್ದೆಗಳು ’ವಿಸಿಟಿಂಗ್ ಕಾರ್ಡ್’ಗೆ ಸೀಮಿತವಾಗದಿರಲಿ: ಮಂಜುನಾಥ ಭಂಡಾರಿ
ನೂತನ ಅಧ್ಯಕ್ಷರಿಗೆ ಪಕ್ಷದ ಧ್ವಜ ಹಸ್ತಾಂತರಿಸಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಸಂಘಟನ್ ಸೃಜನ್ ಅಭಿಯಾನದಡಿ ರಾಜ್ಯದಲ್ಲೇ ಪ್ರಥಮ ಬಾರಿಗೆ ಚುನಾವಣೆ ಮೂಲಕ ಪದ್ಮರಾಜ್ ಅವರ ಆಯ್ಕೆ ನಡೆದಿದೆ. ಪಕ್ಷದಲ್ಲಿ ನೀಡಲಾಗುವ ಹುದ್ದೆಗಳು ಕೇವಲ ‘ವಿಸಿಟಿಂಗ್ ಕಾರ್ಡ್’ಗೆ ಸೀಮಿತವಾಗಬಾರದು; ಸಕ್ರಿಯವಾಗಿ ದುಡಿಯುವವರಿಗೆ ಮಾತ್ರ ಜವಾಬ್ದಾರಿ ಹಂಚಿಕೆ ಮಾಡಲಾಗುವುದು. ಕೆಪಿಸಿಸಿಯಲ್ಲಿ ಕಾರ್ಯದರ್ಶಿಗಳು ಹಾಗೂ ಸಂಯೋಜಕರ ನೇಮಕಕ್ಕೆ ಮುಕ್ತ ಅರ್ಜಿ ಆಹ್ವಾನಿಸಲಾಗಿದ್ದು, ಡಾ.ಜಿ. ಪರಮೇಶ್ವರ್ ನೇತೃತ್ವದ ಸಮಿತಿಯು ಸಂದರ್ಶನ ನಡೆಸಿ ಕ್ರಿಯಾಶೀಲರಿಗೆ ಮಾತ್ರ ಹೊಣೆಗಾರಿಕೆ ವಹಿಸಲಿದೆ. ಜಿಲ್ಲೆಯಲ್ಲಿ ಗ್ರಾ.ಪಂ., ತಾ.ಪಂ., ಜಿ.ಪಂ. ಹಾಗೂ ಪಾಲಿಕೆ ಚುನಾವಣೆಗಳು ಬಾಕಿ ಇದ್ದು, ಸುಮಾರು 4,000 ಜನಪ್ರತಿನಿಧಿ ಸ್ಥಾನಗಳು ಖಾಲಿಯಿವೆ. ವಷಾರ್ಂತ್ಯಕ್ಕೆ ಚುನಾವಣೆ ನಡೆಯುವ ಸಾಧ್ಯತೆಯಿರುವುದರಿಂದ ಮುಂದಿನ ಆರು ತಿಂಗಳು ಸಂಘಟನೆಗೆ ಅತ್ಯಂತ ನಿರ್ಣಾಯಕ. ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಎಲ್ಲರೂ ಕಂಕಣಬದ್ಧರಾಗಬೇಕು, ಎಂದರು.
ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಬಿ. ಜನಾರ್ದನ ಪೂಜಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಸೇರಿದಂತೆ ಹಲವು ಗಣ್ಯರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಈ ಮಹತ್ವದ ಕ್ಷಣಕ್ಕೆ ಸಾಕ್ಷಿಯಾದರು.
ಕಾರ್ಯಕ್ರಮದಲ್ಲಿ ಫಾ.ಗೋಮ್ಸ್ ಆಶೀರ್ವಚನ ನೀಡಿದರು. ವೇದಿಕೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ರಾಜ್ಯಸಭಾ ಮಾಜಿ ಸದಸ್ಯ ಬಿ. ಇಬ್ರಾಹಿಂ, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಪ್ರಮುಖ ಮುಖಂಡರಾದ ಸಂತೋಷ್ ಕುಮಾರ್ ಶೆಟ್ಟಿ, ಟಿ.ಎಂ. ಶಾಹೀದ್ ತೆಕ್ಕಿಲ್, ಮಮತಾ ಗಟ್ಟಿ, ಶಾಲೆಟ್ ಪಿಂಟೋ, ಅಪ್ಪಿ, ಶಶಿಧರ ಹೆಗ್ಡೆ, ಅಶ್ರಫ್ ಕೆ., ಸುರೇಶ್ ಬಲ್ಲಾಳ್, ಕೃಷ್ಣಪ್ಪ, ಎಂ.ಎಸ್. ಮೊಹಮ್ಮದ್, ಸದಾಶಿವ ಉಳ್ಳಾಲ್, ಉಷಾ ಅಂಚನ್, ಶಾಹುಲ್ ಹಮೀದ್, ಈಶ್ವರ್ ಉಳ್ಳಾಲ್, ಮಹಮ್ಮದ್ ಆಲಿ, ಜೋಕಿಂ, ನವಾಝ್, ಎ.ಸಿ. ಭಂಡಾರಿ, ಲಾವಣ್ಯ ಬಲ್ಲಾಳ್, ಯು.ಕೆ. ಮೋನು ಮೊದಲಾದ ನಾಯಕರು ಉಪಸ್ಥಿತರಿದ್ದರು. ನೂತನ ಅಧ್ಯಕ್ಷ ಪದ್ಮರಾಜ್ ಅವರ ತಂದೆ ಎಚ್.ಎಂ. ರಾಮಯ್ಯ ಹಾಗೂ ಸಹೋದರ ಡಾ. ಪುರುಷೋತ್ತಮ್ ಉಪಸ್ಥಿತರಿದ್ದು ಶುಭ ಕೋರಿದರು.

SendShare6Share
Previous Post

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

Next Post

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..