ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4’ ಕಾರ್ಯಕ್ರಮದ ಚಪ್ಪರ ಮುಹೂರ್ತವು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು.
ಪುತ್ತೂರಿನ ಸಾಂಸ್ಕೃತಿಕ ಪರಂಪರೆ ಹಾಗೂ ತುಳುನಾಡಿನ ಜನಪದ ಕಲೆಯ ವೈಭವವನ್ನು ಅನಾವರಣಗೊಳಿಸುವ ಉದ್ದೇಶದಿಂದ ಆಯೋಜಿಸಲಾಗಿರುವ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ವಿಜಯಸಾಮ್ರಾಟ್ ಪುತ್ತೂರು ಸಂಸ್ಥೆಯ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ, ಪಿಲಿಗೊಬ್ಬು ಸಮಿತಿಯ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್, ಪ್ರಧಾನ ಕಾರ್ಯದರ್ಶಿ ಶರತ್ ಆಳ್ವ ಕೂರೇಲು, ಕಾರ್ಯಾಧ್ಯಕ್ಷ ರತನ್ ರೈ ಕುಂಬ್ರ, ಸಹಸಂಚಾಲಕ ರಾಜೇಶ್ ರೈ ಪರ್ಪುಂಜ, ಉಪಾಧ್ಯಕ್ಷರಾದ ಶಂಕರ್ ಭಟ್ ಈಶಾನ್ಯ, ಪವನ್ ಶೆಟ್ಟಿ ಕಂಬಳತ್ತಡ್ಡ, ಕಿರಣ್ ರೈ ಬಲ್ನಾಡು,ಕಾರ್ಯದರ್ಶಿಗಳಾದ ಧನುಷ್ ಹೊಸಮನೆ, ಜೊತೆಕಾರ್ಯದರ್ಶಿಗಳಾದ ಪ್ರೀತಮ್ ಶೆಟ್ಟಿ ಪೆರ್ನೆ,ಗೌತಮ್ ಗೌಡ,ಸಂಘಟನಾ ಕಾರ್ಯದರ್ಶಿಗಳಾದ ಅರುಣ್ ರೈ ಆನಾಜೆ,ಮಹೇಶ್ ಆಚಾರ್ಯ, ಕೋಶಾಧಿಕಾರಿಗಳಾದ ಅಶೋಕ್ ಅಡೂರು, ಸಮಿತಿಯ ಸದಸ್ಯರಾದ ರಂಜಿತ್ ಶೆಟ್ಟಿ ಗುಬ್ಯ,ಜಗದೀಶ್ ನಾಯಕ್, ಶರತ್ ಬಲ್ನಾಡು,ಸಚಿನ್ ಪಟ್ಟೆ,ಭರತ್ ಚನಿಲ,ಶರತ್ ಮುಂಡಾಸ್,ಮನೋಹರ ಬರಿಮಾರು,ಪ್ರದೀಪ್ ರೈ ಮಾಡಾವು,ಅಭಿಲಾಷ್, ಹರ್ಷರಾಜ್ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.
























