ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ಗಿರಿಜಾ ಕಲ್ಯಾಣೋತ್ಸವ ಸಮಿತಿ ಪುತ್ತೂರು ಇದರ ಸಾರಥ್ಯದಲ್ಲಿ ಪುತ್ತೂರಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಗಿರಿಜಾ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಜ್ರದೇಹಿ ಮಠ ಗುರುಪುರದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.

ಕಾರ್ಯಕ್ರಮದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಗಿರಿಜಾ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷ ಡಾ. ಅಖಿಲೇಶ್ ಪಾಣಾಜೆ, ವಿಶ್ವ ಹಿಂದೂ ಪರಿಷತ್ ಕರ್ನಾಟಕ ಪ್ರಾಂತ ಉಪಾಧ್ಯಕ್ಷ ಯು. ಪೂವಪ್ಪ, ದೈವ ನರ್ತಕ ಚಂದ್ರ ನಳಿಕೆ, ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಹಾಗೂ ಪುತ್ತಿಲ ಪರಿವಾರದ ಅಧ್ಯಕ್ಷ ಶ್ರೀರಾಮ್ ಭಟ್ ಪಾತಾಳ, ಗಿರಿಜಾ ಕಲ್ಯಾಣೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ತೆಂಕಿಲ, ಕೋಶಾಧಿಕಾರಿ ಉದಯ ಕುಮಾರ್, ಸೀತಾ ಪರಿವಾರದ ಅಧ್ಯಕ್ಷೆ ಪ್ರೇಮಾ ರಾಧಾಕೃಷ್ಣ ರೈ, ಕ್ಷೇತ್ರದ ಗುರು ತಂತ್ರಿಗಳು, ಗೌರವಾಧ್ಯಕ್ಷರಾದ ವಾಸು ಪೂಜಾರಿ, ಸುಜಿತ್ ಗಣಪತಿ ನಾಯಕ್, ಮೋನಪ್ಪ ಪುರುಷ, ಕಾರ್ಯಾಧ್ಯಕ್ಷ ಅನಿಲ್ ಕಣ್ಣರ್ನೂಜಿ ಉಪಸ್ಥಿತರಿದ್ದರು. ವಿಭಾ ಪ್ರಾರ್ಥಿಸಿದರು. ಅನಿಲ್ ಕಣ್ಣರ್ನೂಜಿ ಸ್ವಾಗತಿಸಿದರು. ರವಿ ರೈ ಮಠ ಕಾರ್ಯಕ್ರಮ ನಿರೂಪಿಸಿದರು.






















