• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರದಿಂದ ರೈತರು, ಹೈನುಗಾರರು, ವಿದ್ಯಾರ್ಥಿಗಳು ಹಾಗೂ ರಾಜ್ಯದ ಸಾಮಾನ್ಯ ಜನರ ಬದುಕಿನ ಮೇಲೆ ಗಂಭಿರ ಪರಿಣಾಮ ಬೀರುತ್ತಿದೆ – ಅರುಣ್ ಕುಮಾರ್ ಪುತ್ತಿಲ

November 3, 2026
ಬೆಳ್ತಂಗಡಿ : ಕ್ಲಿನಿಕ್‌ ಬೆಂಕಿ ಹಚ್ಚಿದ್ದ ಪ್ರಕರಣದ ಹಿನ್ನೆಲೆ- ಕ್ಲಿನಿಕ್‌ಗೆ ಸಚಿವ ಯು.ಟಿ. ಖಾದರ್‌ ಭೇಟಿ ಮಾತುಕತೆ

ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ ಮತ್ತು ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ತೆಂಕಿಲ ನಿವಾಸಿಗೆ ಧನಸಹಾಯ

ರಬ್ಬರ್ ತೋಟಗಳಲ್ಲಿ ಕಾರ್ಮಿಕರ ಅಭಾವ ಮಾಲೀಕರು ಎದುರಿಸುತ್ತಿರುವ ಪ್ರಮುಖ ಸಮಸ್ಯೆ : ಕಾರ್ಮಿಕರಿಗೆ ರಬ್ಬರ್‌ ಟ್ಯಾಪಿಂಗ್ ಕೌಶಲದ ತರಬೇತಿ ಅರ್ಜಿಗೆ ಅವಕಾಶ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಂಘದ ಪ್ರಮುಖರ ಶಾಸಕ ಅಶೋಕ್ ಕುಮಾರ್ ರೈ ಅವರ ಭೇಟಿ- ಸಂಘದ ನಿವೇಶನದ ಬೇಡಿಕೆ

ಪುತ್ತೂರು:ಛಾಯಾಗ್ರಾಹಕ, ಸಿನಿಮಾ ನಿರ್ದೇಶಕ ಮುಂಡೂರಿನ ರವಿಚಂದ್ರ ರೈಗೆ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ

November 2, 2026
ಪುತ್ತೂರು: ಬಿಜೆಪಿಯಿಂದ ನಮ್ಮ ಹಕ್ಕು ನಮಗೆ ನೀಡಿ ಪುತ್ತೂರಿನಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

ಸುಳ್ಳು ರೇಪ್ ಕೇಸ್, ಅಮಾನುಷ ಗುಂಪು ಹಲ್ಲೆ- ಆಸ್ಪತ್ರೆಯಲ್ಲಿ ಯುವಕ ಆತ್ಮಹತ್ಯೆ

October 31, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

ಪುತ್ತೂರಿನ ಜಿಲ್ಲಾ ಪಂಚಾಯತ್ ಕ್ಷೇತ್ರ ಮತ್ತು  ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ!

ಅನುದಾನ ಕಡಿತ ಹಾಗೂ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯದಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟಕ್ಕೆ-ಬಿಜೆಪಿ

ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, November 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ : ಕ್ಲಿನಿಕ್‌ ಬೆಂಕಿ ಹಚ್ಚಿದ್ದ ಪ್ರಕರಣದ ಹಿನ್ನೆಲೆ- ಕ್ಲಿನಿಕ್‌ಗೆ ಸಚಿವ ಯು.ಟಿ. ಖಾದರ್‌ ಭೇಟಿ ಮಾತುಕತೆ

    ಬೆಳ್ತಂಗಡಿ : ಕ್ಲಿನಿಕ್‌ ಬೆಂಕಿ ಹಚ್ಚಿದ್ದ ಪ್ರಕರಣದ ಹಿನ್ನೆಲೆ- ಕ್ಲಿನಿಕ್‌ಗೆ ಸಚಿವ ಯು.ಟಿ. ಖಾದರ್‌ ಭೇಟಿ ಮಾತುಕತೆ

    ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ ಮತ್ತು ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ತೆಂಕಿಲ ನಿವಾಸಿಗೆ ಧನಸಹಾಯ

    ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ ಮತ್ತು ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ತೆಂಕಿಲ ನಿವಾಸಿಗೆ ಧನಸಹಾಯ

    ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರದಿಂದ ರೈತರು, ಹೈನುಗಾರರು, ವಿದ್ಯಾರ್ಥಿಗಳು ಹಾಗೂ ರಾಜ್ಯದ ಸಾಮಾನ್ಯ ಜನರ ಬದುಕಿನ ಮೇಲೆ ಗಂಭಿರ ಪರಿಣಾಮ ಬೀರುತ್ತಿದೆ – ಅರುಣ್ ಕುಮಾರ್ ಪುತ್ತಿಲ

    ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರದಿಂದ ರೈತರು, ಹೈನುಗಾರರು, ವಿದ್ಯಾರ್ಥಿಗಳು ಹಾಗೂ ರಾಜ್ಯದ ಸಾಮಾನ್ಯ ಜನರ ಬದುಕಿನ ಮೇಲೆ ಗಂಭಿರ ಪರಿಣಾಮ ಬೀರುತ್ತಿದೆ – ಅರುಣ್ ಕುಮಾರ್ ಪುತ್ತಿಲ

    ರಬ್ಬರ್ ತೋಟಗಳಲ್ಲಿ ಕಾರ್ಮಿಕರ ಅಭಾವ ಮಾಲೀಕರು ಎದುರಿಸುತ್ತಿರುವ ಪ್ರಮುಖ ಸಮಸ್ಯೆ : ಕಾರ್ಮಿಕರಿಗೆ ರಬ್ಬರ್‌ ಟ್ಯಾಪಿಂಗ್ ಕೌಶಲದ ತರಬೇತಿ ಅರ್ಜಿಗೆ ಅವಕಾಶ

    ರಬ್ಬರ್ ತೋಟಗಳಲ್ಲಿ ಕಾರ್ಮಿಕರ ಅಭಾವ ಮಾಲೀಕರು ಎದುರಿಸುತ್ತಿರುವ ಪ್ರಮುಖ ಸಮಸ್ಯೆ : ಕಾರ್ಮಿಕರಿಗೆ ರಬ್ಬರ್‌ ಟ್ಯಾಪಿಂಗ್ ಕೌಶಲದ ತರಬೇತಿ ಅರ್ಜಿಗೆ ಅವಕಾಶ

    ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಂಘದ ಪ್ರಮುಖರ ಶಾಸಕ ಅಶೋಕ್ ಕುಮಾರ್ ರೈ ಅವರ ಭೇಟಿ- ಸಂಘದ ನಿವೇಶನದ ಬೇಡಿಕೆ

    ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಂಘದ ಪ್ರಮುಖರ ಶಾಸಕ ಅಶೋಕ್ ಕುಮಾರ್ ರೈ ಅವರ ಭೇಟಿ- ಸಂಘದ ನಿವೇಶನದ ಬೇಡಿಕೆ

    ಪುತ್ತೂರು:ಛಾಯಾಗ್ರಾಹಕ, ಸಿನಿಮಾ ನಿರ್ದೇಶಕ ಮುಂಡೂರಿನ ರವಿಚಂದ್ರ ರೈಗೆ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ

    ಪುತ್ತೂರು:ಛಾಯಾಗ್ರಾಹಕ, ಸಿನಿಮಾ ನಿರ್ದೇಶಕ ಮುಂಡೂರಿನ ರವಿಚಂದ್ರ ರೈಗೆ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ

    ಪುತ್ತೂರು: ಬಿಜೆಪಿಯಿಂದ ನಮ್ಮ ಹಕ್ಕು ನಮಗೆ ನೀಡಿ ಪುತ್ತೂರಿನಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

    ಪುತ್ತೂರು: ಬಿಜೆಪಿಯಿಂದ ನಮ್ಮ ಹಕ್ಕು ನಮಗೆ ನೀಡಿ ಪುತ್ತೂರಿನಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

    ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

    ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರದಿಂದ ರೈತರು, ಹೈನುಗಾರರು, ವಿದ್ಯಾರ್ಥಿಗಳು ಹಾಗೂ ರಾಜ್ಯದ ಸಾಮಾನ್ಯ ಜನರ ಬದುಕಿನ ಮೇಲೆ ಗಂಭಿರ ಪರಿಣಾಮ ಬೀರುತ್ತಿದೆ – ಅರುಣ್ ಕುಮಾರ್ ಪುತ್ತಿಲ

by ಪ್ರಜಾಧ್ವನಿ ನ್ಯೂಸ್
November 3, 2026
in ಪುತ್ತೂರು, ರಾಜಕೀಯ, ರಾಜ್ಯ
0
ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರದಿಂದ ರೈತರು, ಹೈನುಗಾರರು, ವಿದ್ಯಾರ್ಥಿಗಳು ಹಾಗೂ ರಾಜ್ಯದ ಸಾಮಾನ್ಯ ಜನರ ಬದುಕಿನ ಮೇಲೆ ಗಂಭಿರ ಪರಿಣಾಮ ಬೀರುತ್ತಿದೆ – ಅರುಣ್ ಕುಮಾರ್ ಪುತ್ತಿಲ
6
SHARES
17
VIEWS
ShareShareShare

ಪುತ್ತೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿವಿಧ ಭ್ರಷ್ಟ ನಿರ್ಧಾರಗಳು ರೈತರು, ಹೈನುಗಾರರು, ವಿದ್ಯಾರ್ಥಿಗಳು ಹಾಗೂ ರಾಜ್ಯದ ಸಾಮಾನ್ಯ ಜನರ ಬದುಕಿನ ಮೇಲೆ ಈಚೆಗೆ ಗಂಭಿರ ಪರಿಣಾಮ ಬೀರುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಗಮನಿಸಿದಾಗ ಸರ್ಕಾರದ ಯೋಜನೆಗಳ ಅನುಷ್ಠಾನ ಮತ್ತು ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಚರ್ಚೆಗೆ ಒಳಪಡಬೇಕಾದ ವಿಷಯಗಳಾಗಿವೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ.

ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಘೋಷಿಸಿರುವ ₹2,500 ಪರಿಹಾರ ಪಡೆಯಲು ಕೆಲವು ಮಾರ್ಗಸೂಚಿ ರೂಪಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಬೆಳೆವಿಮೆಯಲ್ಲೂ ಅದೇ ಮಾದರಿಯ ಗೊಂದಲವಾಗಿದೆ, ಇಂದಿಗೂ ಸರ್ಕಾರ, ಸ್ಥಳೀಯ ಶಾಸಕರು ಅದನ್ನು ಸರಿಪಡಿಸಲು ಮನಸ್ಸು ಮಾಡಿಲ್ಲ, ಹೋರಾಟ, ಪ್ರತಿಭಟನೆಗಳು ಆರಂಭವಾಗಿದೆ. ಈಗ ಪುತ್ತೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬರಪೀಡಿತ ಎಂದು ಗುರುತಿಸಲಾದ ಪ್ರದೇಶಗಳ ರೈತರಿಗೆ ಈ ಪರಿಹಾರ ತಲುಪುವ ಪ್ರಕ್ರಿಯೆ ಸರಳವಾಗಿರಬೇಕು. ಈಗಾಗಲೇ ಅಡಿಕೆ, ತೆಂಗು, ರಬ್ಬರ್, ಕಾಳುಮೆಣಸು ಸೇರಿದಂತೆ ವಿವಿಧ ಬೆಳೆಗಳ ಕೃಷಿ ವೆಚ್ಚ ಹೆಚ್ಚಳದಿಂದ ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಪರಿಹಾರಕ್ಕಾಗಿ ದಾಖಲೆಗಳ ಪರಿಶೀಲನೆ, ತಾಂತ್ರಿಕ ಸಮಸ್ಯೆ ಹಾಗೂ ಕಚೇರಿಗಳ ಅಲೆದಾಟದಿಂದ ಅರ್ಹ ರೈತರು ತೊಂದರೆ ಅನುಭವಿಸಬಾರದು ಎಂದು ಅರುಣ್‌ ಕುಮಾರ್‌ ಪುತ್ತಿಲ ಒತ್ತಾಯಿಸಿದ್ದಾರೆ.
ಬೆಳೆ ಸಮೀಕ್ಷೆ, ಆಧಾರ್ ಜೋಡಣೆ ಹಾಗೂ ಪಹಣಿ ದಾಖಲೆಗಳಲ್ಲಿನ ವ್ಯತ್ಯಾಸಗಳಿಂದ ಯಾವುದೇ ಅರ್ಹ ರೈತರಿಗೆ ಪರಿಹಾರ ಸಿಗದೆ ಹೋಗಬಾರದು. ರೈತರ ದಾಖಲೆಗಳಲ್ಲಿ ದೋಷಗಳಿದ್ದರೆ ಅಧಿಕಾರಿಗಳೇ ಸ್ಥಳೀಯವಾಗಿ ಪರಿಶೀಲಿಸಿ ಸಮಸ್ಯೆ ಬಗೆಹರಿಸಬೇಕು. ಪರಿಹಾರ ನೀಡುವ ಉದ್ದೇಶ ರೈತರಿಗೆ ನೆರವಾಗುವುದೇ ಹೊರತು ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸುವುದಲ್ಲ ಎಂದು ಹೇಳಿದ್ದಾರೆ.

LOTUS TRAVEL

ಜಾಹೀರಾತು

ನವೆಂಬರ್ 1ರಿಂದ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ ₹8 ಹೆಚ್ಚಿಸಲಾಗಿದೆ. ಈ ಹೆಚ್ಚಳದಲ್ಲಿ ₹7 ಹೈನುಗಾರರಿಗೆ ಹಾಗೂ ₹1 ಹಾಲು ಒಕ್ಕೂಟಗಳಿಗೆ ನೀಡಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ. ಹೈನುಗಾರರಿಗೆ ಉತ್ತಮ ದರ ಸಿಗಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ ಹಾಲು ಖರೀದಿಸುವ ಸಾಮಾನ್ಯ ಕುಟುಂಬಗಳ ಆರ್ಥಿಕ ಸ್ಥಿತಿಯನ್ನೂ ಸರ್ಕಾರ ಪರಿಗಣಿಸಬೇಕು. ದಕ್ಷಿಣ ಕನ್ನಡದಲ್ಲಿ ಸಾವಿರಾರು ಕುಟುಂಬಗಳು ಹೈನುಗಾರಿಕೆಯನ್ನು ಉಪಕಸುಬಾಗಿ ಅವಲಂಬಿಸಿವೆ. ಪಶು ಆಹಾರ, ಮೇವು, ಪಶುವೈದ್ಯಕೀಯ ವೆಚ್ಚ ಹಾಗೂ ಕಾರ್ಮಿಕರ ವೆಚ್ಚ ಹೆಚ್ಚಾಗಿದೆ. ಹೀಗಾಗಿ ಹೈನುಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಬೇಕು. ಅದೇ ರೀತಿ ಗ್ರಾಹಕರ ಮೇಲಿನ ಬೆಲೆ ಏರಿಕೆಯ ಹೊರೆಯನ್ನು ನಿಯಂತ್ರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ನವೆಂಬರ್ 5ರಿಂದ ರಾಜ್ಯದ ಸರ್ಕಾರಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ದಕ್ಷಿಣ ಕನ್ನಡದ ಗ್ರಾಮೀಣ ಪ್ರದೇಶಗಳಲ್ಲಿ ಬಸ್ ಪ್ರಯಾಣವೇ ಜನರ ಪ್ರಮುಖ ಸಾರಿಗೆ ವ್ಯವಸ್ಥೆಯಾಗಿದೆ. ಸುಳ್ಯ, ಪುತ್ತೂರು, ಕಡಬ, ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ ಸೇರಿದಂತೆ ಗ್ರಾಮೀಣ ಭಾಗಗಳಿಂದ ಪ್ರತಿದಿನ ಮಂಗಳೂರು, ಪುತ್ತೂರು ಹಾಗೂ ಇತರ ಪಟ್ಟಣಗಳಿಗೆ ಪ್ರಯಾಣಿಸುವ ವಿದ್ಯಾರ್ಥಿಗಳು, ಉದ್ಯೋಗಿಗಳು, ಕಾರ್ಮಿಕರು ಮತ್ತು ವ್ಯಾಪಾರಸ್ಥರಿಗೆ ಬಸ್ ದರ ಏರಿಕೆ ನೇರವಾಗಿ ಪರಿಣಾಮ ಬೀರಲಿದೆ. ವಿಶೇಷವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಪ್ರತಿದಿನ ಬಸ್ ಅವಲಂಬಿಸಿದ್ದಾರೆ. ಈಗಾಗಲೇ ಕುಟುಂಬಗಳ ಖರ್ಚು ಹೆಚ್ಚಾಗಿರುವ ಸಂದರ್ಭದಲ್ಲಿ ಪ್ರಯಾಣ ದರ ಹೆಚ್ಚಳವು ಅವರ ಮೇಲಿನ ಹೊರೆಯನ್ನು ಮತ್ತಷ್ಟು ಹೆಚ್ಚಿಸಲಿದೆ. ಸಾರಿಗೆ ಸಂಸ್ಥೆಗಳ ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಅಗತ್ಯ. ಆದರೆ ಅದರ ಸಂಪೂರ್ಣ ಹೊರೆಯನ್ನು ಪ್ರಯಾಣಿಕರ ಮೇಲೆ ವರ್ಗಾಯಿಸುವ ಬದಲು ಪರ್ಯಾಯ ಮಾರ್ಗಗಳನ್ನೂ ಸರ್ಕಾರ ಪರಿಶೀಲಿಸಬೇಕು. ವಿದ್ಯಾರ್ಥಿಗಳು ಮತ್ತು ಗ್ರಾಮೀಣ ಪ್ರಯಾಣಿಕರ ಹಿತವನ್ನು ವಿಶೇಷವಾಗಿ ಕಾಪಾಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾಕಷ್ಟು ಪ್ರಚಾರ ನಡೆಯುತ್ತಿದೆ. ಆದರೆ ಗ್ರಾಮೀಣ ಭಾಗದಲ್ಲಿ ಸಮರ್ಪಕ ಬಸ್ ಸೌಲಭ್ಯ, ರೈತರಿಗೆ ಬೆಳೆ ಪರಿಹಾರ, ಹೈನುಗಾರರಿಗೆ ನ್ಯಾಯಯುತ ಆದಾಯ, ಕೃಷಿ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ದರ ಹಾಗೂ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಅಗತ್ಯ ವಸ್ತುಗಳು ದೊರೆಯುವುದು ಕೂಡ ಅಷ್ಟೇ ಮುಖ್ಯ. ದಕ್ಷಿಣ ಕನ್ನಡ ಜಿಲ್ಲೆಯ ರೈತರು ಅಡಿಕೆ, ತೆಂಗು, ರಬ್ಬರ್, ಕಾಳುಮೆಣಸು ಹಾಗೂ ಇತರ ತೋಟಗಾರಿಕಾ ಬೆಳೆಗಳನ್ನು ನಂಬಿ ಬದುಕುತ್ತಿದ್ದಾರೆ. ಕೃಷಿ ವೆಚ್ಚ ಹೆಚ್ಚಳ, ಮಾರುಕಟ್ಟೆ ಧಾರಣೆಯ ಏರಿಳಿತ, ಕಾರ್ಮಿಕರ ಕೊರತೆ ಮತ್ತು ಹವಾಮಾನ ವೈಪರೀತ್ಯಗಳಿಂದ ಈಗಾಗಲೇ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳಿಗೆ ಸರ್ಕಾರ ಆದ್ಯತೆಯ ಮೇರೆಗೆ ಪರಿಹಾರ ನೀಡಬೇಕು. ರೈತರಿಗೆ ಘೋಷಿಸಿದ ಪರಿಹಾರ ಸಕಾಲದಲ್ಲಿ ತಲುಪಬೇಕು. ಹೈನುಗಾರರ ಆದಾಯ ಹೆಚ್ಚಳದ ಜತೆಗೆ ಗ್ರಾಹಕರ ಹಿತವೂ ಕಾಪಾಡಬೇಕು. ಗ್ರಾಮೀಣ ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಪ್ರಯಾಣಿಕರಿಗೆ ಹೊರೆಯಾಗದಂತೆ ಬಸ್ ದರ ನೀತಿಯನ್ನು ರೂಪಿಸಬೇಕು.

ಜಾಹೀರಾತು

ಸರ್ಕಾರಕ್ಕೆ ಜನರ ಬದುಕು ಮುಖ್ಯವಾಗಬೇಕು. ಯೋಜನೆಗಳ ಘೋಷಣೆಗಿಂತ ಅವುಗಳ ಪರಿಣಾಮಕಾರಿ ಅನುಷ್ಠಾನ ಮುಖ್ಯ. ರೈತರು, ಹೈನುಗಾರರು, ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಆಡಳಿತಕ್ಕೆ ಆದ್ಯತೆ ನೀಡಬೇಕು ಎಂದು ಅರುಣ್ ಕುಮಾರ್ ಪುತ್ತಿಲ ಆಗ್ರಹಿಸಿದ್ದಾರೆ.

SendShare2Share
Previous Post

ರಬ್ಬರ್ ತೋಟಗಳಲ್ಲಿ ಕಾರ್ಮಿಕರ ಅಭಾವ ಮಾಲೀಕರು ಎದುರಿಸುತ್ತಿರುವ ಪ್ರಮುಖ ಸಮಸ್ಯೆ : ಕಾರ್ಮಿಕರಿಗೆ ರಬ್ಬರ್‌ ಟ್ಯಾಪಿಂಗ್ ಕೌಶಲದ ತರಬೇತಿ ಅರ್ಜಿಗೆ ಅವಕಾಶ

Next Post

ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ ಮತ್ತು ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ತೆಂಕಿಲ ನಿವಾಸಿಗೆ ಧನಸಹಾಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ ಮತ್ತು ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ತೆಂಕಿಲ ನಿವಾಸಿಗೆ ಧನಸಹಾಯ

ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ ಮತ್ತು ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ತೆಂಕಿಲ ನಿವಾಸಿಗೆ ಧನಸಹಾಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In