ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ನವವಿವಾಹಿತೆಯ ಸಾವಿಗೆ ಸಂಬಂಧಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಪುತ್ತೂರಿನ ದಕ್ಷಿಣ ಕನ್ನಡಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 53/2026ರ ಪ್ರಕರಣದಲ್ಲಿ ಆರೋಪಿಗಳಾದ ಮೃತಳ ನಾದಿನಿ ವಸಂತಿ ಕೆ. ಮತ್ತು ಮೈದುನ ಉಮೇಶ್ ಬಿ. ಅವರಗಳ ವಿರುದ್ಧ
ಭಾರತೀಯ ನ್ಯಾಯ ಸಂಹಿತೆಯ ಕಲಂ 108 85 ಹಾಗೂ 3(5)ರ ಅಡಿಯಲ್ಲಿ ಆತ್ಮಹತ್ಯೆ ಗೆ ದುಷ್ಪ್ರೆರಣೆ ಮಾಡಿದ್ದಾರೆ ಎಂಬುದಾಗಿ ಆರೋಪಿಸಿ
ಪ್ರಕರಣ ದಾಖಲಾಗಿತ್ತು.
ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಮಾನ್ಯ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣದ ಇಬ್ಬರು ಆರೋಪಿಗಳಿಗೂ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ
ಆರೋಪಿಗಳ ಪರವಾಗಿ ಚಾಣಕ್ಯ ಲಾ ಚೇಂಬರ್ಸ್ ನ ನ್ಯಾಯವಾದಿ ಶ್ಯಾಮ್ ಪ್ರಸಾದ್ ಕೈಲಾರ್ ವಾದಿಸಿದ್ದರು .

























