ಪುತ್ತೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಬಿಳುವಾರಿನಲ್ಲಿರುವ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಆರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.
ಅವರು ಮುಕ್ರಂಪಾಡಿ ಸರಕಾರಿ ಬಾಲಕಿಯರ ಪ ಪೂ ಕಾಲೇಜಿನ ನೂತನ ಸಭಾ ಭವನ ಉದ್ಘಾಟನೆ ಮಾಡಿ ಮಾತನಾಡಿ.
ಮುಕ್ರಂಪಾಡಿ ಸರಕಾರಿ ಮಹಿಳಾ ಪಿ ಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಇದ್ದು ಇದೇ ವಿದ್ಯಾರ್ಥಿಗಳಿಗೆ ಪದವಿ ಕಲಿಯುವ ವೇಳೆ ಸೈನ್ಸ್ ಅಗತ್ಯವಿದ್ದು ಅದಕ್ಕೆ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಮುಕ್ರಂಪಾಡಿ ಬಾಲಕಿಯರ ಪ ಪೂ ಕಾಲೇಜು ನಾನು ಶಾಸಕನಾದ ಮೊದಲ ಅವಧಿಯಲ್ಲಿ ಇಲ್ಲ ಎಲ್ಲದರ ಕೊರತೆ ಇತ್ತು ಈಗ ಅದನ್ನು ಸಂಪೂರ್ಣವಾಗಿ ನೀಗಿಸಲಾಗಿದೆ. ಗ್ರಾಮೀಣ ವಿದ್ಯಾರ್ಥಿನಿಯರಿಗೆ ಈ ಕಾಲೇಜು ಹೆಚ್ಚು ಪ್ರಯೋಜನವಾಗುತ್ತಿದೆ ಎಂದು ಹೇಳಿದರು.

























