ಪುತ್ತೂರು: ವೀರಾಂಜನೇಯ ಕ್ಷೇತ್ರ ನೆಲಪ್ಪಾಲಿನಲ್ಲಿ ನವೆಂಬರ್ 26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಹವನದ ಅಂಗವಾಗಿ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮ ನಡೆಯಿತು.
ಮುಳಿಯ ಕೇಶವಪ್ರಸಾದ್ ಅವರು ಆಮಂತ್ರಣ ಪತ್ರಿಕೆ ವಿತರಣೆಗೆ ಚಾಲನೆ ನೀಡಿದರು. ಬಳಿಕ ಪುತ್ತೂರಿನ ಬೀದಿ ಬೀದಿಗಳಲ್ಲಿ ಸಂಚರಿಸಿ ಅಂಗಡಿ ಮುಂಗಟ್ಟುಗಳಿಗೆ ಹಾಗೂ ಸಾರ್ವಜನಿಕರಿಗೆ ಪಂಚಮುಖಿ ಹವನದ ಆಮಂತ್ರಣ ಪತ್ರಿಕೆಗಳನ್ನು ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ಧಾರ್ಮಿಕ ಶ್ರದ್ಧೆ ಹಾಗೂ ಲೋಕಕಲ್ಯಾಣದ ಸಂಕಲ್ಪದೊಂದಿಗೆ ನಡೆಯಲಿರುವ ಪಂಚಮುಖಿ ಹವನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವಂತೆ ಈ ಮೂಲಕ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಪುತ್ತೂರಿನ ಹಿಂದೂ ಸಂಘಟನೆಗಳ ಪ್ರಮುಖರು, ಬಿಜೆಪಿ ಮುಖಂಡರು, ಆಂಜನೇಯನ ಭಕ್ತಾಭಿಮಾನಿಗಳು ಹಾಗೂ ಪುತ್ತೂರಿನ ಸಾರ್ವಜನಿಕರು ಉಪಸ್ಥಿತರಿದ್ದರು.
























