ಮಂಗಳೂರು: ಮೇ 20 ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿದೆ. ಪರಿಣಾಮ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮೇ 24ರ ತನಕ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ 25ರ ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಅಂಡಮಾನ್ ಹಾಗೂ ಕೇರಳಕ್ಕೆ ಅವಧಿಗೆ ಮುನ್ನವೇ ಮುಂಗಾರು ಆಗಮಿಸುವ ವರದಿಗಳಿದ್ದರೂ ಆರಂಭಿಕ ದುರ್ಬಲತೆ ಇದ್ದರೆ ರಾಜ್ಯಕ್ಕೆ ಮುಂಗಾರು ಪ್ರವೇಶ ತಡವಾಗಬಹುದು ಎಂದು ರಾಷ್ಟ್ರೀಯ ಹವಾಮಾನ ಮುನ್ಸೂಚನಾ ಕೇಂದ್ರ ಮಾಹಿತಿ ನೀಡಿದೆ.