ಬಿಜೆಪಿಯಿಂದ ರಘಪತಿ ಭಟ್ ವಜಾ, ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿಯಿಂದ ಟ್ವೀಟ್ ವೈರಲ್
ಕಳೆದ ವರ್ಷ ರಾಜ್ಯದಲ್ಲಿ ಬಿಜೆಪಿ ಸರಕಾರದ ಸಂಧರ್ಭದಲ್ಲಿ ತಲೆನೋವು ತಂದ ವಿಚಾರವೇ ಉಡುಪಿಯ ಹಿಜಾಬ್ ವಿವಾದ. ಉಡುಪಿಯಲ್ಲಿ ತರಗತಿ ಮತ್ತು ಪರೀಕ್ಷಾ ಕೇಂದ್ರಗಳಿಗೆ ಮುಸ್ಲಿಂ ಯುವತಿಯರಿಗೆ ಹಿಜಾಬ್ ಗೆ ಅವಕಾಶ ನೀಡದ ಸಂಧರ್ಭದಲ್ಲಿ ದ್ವೀತಿಯ ಪಿಯುಸಿ ಪರೀಕ್ಷೆ ಬರೆಯದೇ ವಾಪಾಸ್ ತೆರಳಿ ನನಗೆ ಪರೀಕ್ಷೆಗಿಂತ ಹಿಜಾಬ್ ಮುಖ್ಯ ಎಂಬುದನ್ನು ಸಾಭೀತು ಮಾಡಿದ ಹಿಜಾಬ್ ಹೋರಾಟಗಾರ್ತಿ ಆಲಿಯಾ ಟ್ವೀಟ್ ಮೂಲಕ ಮತ್ತೆ ಸುದ್ದಿಯಲಿದ್ದಾರೆ.
ಹಿಜಾಬ್ ಮತ್ತು ರಘಪತಿ ಭಟ್ ವಜಾ ವಿಚಾರವನ್ನು ಜೊತೆಯಾಗಿಸಿ ಈ ರೀತಿ ಟ್ವೀಟ್ ಮಾಡಿದ್ದಾರೆ.(ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ, ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ ನೀವು ಉಚ್ಚಾಟಿತ ವ್ಯಕ್ತಿ) ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು. ವಾರ್ಷಿಕ ಪರೀಕ್ಷೆಗೆ ಇನ್ನೇನು 60 ದಿನಗಳಿರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿ ತೋರಿಸಿದರಲ್ಲವೇ, ಆದರೆ ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವ ಆ ಕ್ಷಣವನ್ನು ನಾನು ನನ್ನ ಉಡುಪಿಯಲ್ಲೇ ನೋಡುವಂತಾಯಿತು ಎಂದು ಸಂತೋಷ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
ಪ್ರಸ್ತುತ ವಿಧಾನ ಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಉಡುಪಿ ಕ್ಷೇತ್ರದ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಕಳೆದ ವಾರ ಬಿಜೆಪಿ ಉಚ್ಛಾಟನೆ ಮಾಡಿದೆ. ಈ ಹಿಂದೆ ಹಿಜಾಬ್ ವಿವಾದ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ನಿರಾಕರಣೆ ಮಾಡಲಾಗಿತ್ತು.ಇದು ರಾಜ್ಯದಲ್ಲಿ ಸುದ್ದಿಯಾಗಿತ್ತು ಈ ಸಂಧರ್ಭ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಒತ್ತಡ ಹೇರಿದ್ದರು ಎಂದು ತಿಳಿದು ಬಂದಿತ್ತು.
ಪ್ರಸ್ತುತ ಈ ವಿಚಾರವು ಚರ್ಚೆಯಲ್ಲಿದ್ದು ಜೂನ್ 3 ರಂದು ನಡೆಯುವ ಚುನಾವಣೆಯ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.