ಬಿಜೆಪಿ ವರ್ಚಸ್ಸಿಗೆ ದಕ್ಕೆ ಬೆಂಗಳೂರು ನ್ಯಾಯಾಲಯದಲ್ಲಿ ರಾಹುಲ್ ಗಾಂಧಿಗೆ ಷರತ್ತು ಬದ್ಧ ಜಾಮೀನು, 75 ಲಕ್ಷ ಶ್ಯೂರಿಟಿ ನೀಡಿದ ಡಿ ಕೆ ಸುರೇಶ್.
ಭ್ರಷ್ಟಾಚಾರ ಕುರಿತು ದಿನಪತ್ರಿಕೆಗಳಿಗೆ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬೆಂಗಳೂರಿನ 42ನೇ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಷರತ್ತು ಬದ್ದ ಜಾಮೀನು ನೀಡಿದೆ.
ಮುಂದಿನ ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿದೆ. ಮಾಜಿ ಸಂಸದ ಡಿ.ಕೆ.ಸುರೇಶ್ ಅವರು 75 ಲಕ್ಷ ಮೌಲ್ಯದ ಆಸ್ತಿದ ದಾಖಲೆಯನ್ನು ಶ್ಯೂರಿಟಿಯಾಗಿ ನೀಡಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಕೋರ್ಟ್ಗೆ ಖುದ್ದು ಹಾಜರಾಗಲು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದರು. ಕೋರ್ಟ್ ವಿಚಾರಣೆಗೆ ಹಾಜರಾಗಲು ರಾಹುಲ್ ಸಹಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಜೂ.1ರಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಖುದ್ದು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದರು. ಇಂದು ವಿಚಾರಣೆಗೆ ಆಗಮಿಸಿದ ರಾಹುಲ್ ಗಾಂಧಿ ಬೇಲ್ ಪಡೆದು ದೆಹಲಿಗೆ ವಾಪಾಸ್ಸಗಿದ್ದಾರೆ.